ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗರೆ: ಸಿಇಟಿ ಪರೀಕ್ಷೆ ಆರಂಭ 

Last Updated 30 ಜುಲೈ 2020, 5:53 IST
ಅಕ್ಷರ ಗಾತ್ರ

ದಾವಣಗರೆ: ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಕೊಂಡೇ ಸಿಇಟಿ ಗುರುವಾರ ಜಿಲ್ಲೆಯ 16 ಕೇಂದ್ರಗಳಲ್ಲಿ ಆರಂಭಗೊಂಡಿತು.

ದಾವಣಗೆರೆ ಪಾಲಿಕೆ ವ್ಯಾಪ್ತಿಯ 13 ಕೇಂದ್ರಗಳು, ಚನ್ನಗಿರಿ, ಹೊನ್ನಾಳಿ, ಹರಿಹರ ತಾಲ್ಲೂಕು ಕೇಂದ್ರಗಳಲ್ಲಿ ತಲಾ ಒಂದು ಕೇಂದ್ರಗಳಲ್ಲಿ 7008 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು.

ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಲಾಗಿತ್ತು. ಗುರುವಾರ ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಲಾಯಿತು. ಮಾಸ್ಕ್‌ ಹಾಕಿಕೊಂಡೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ಗುಂಪುಗೂಡದಂತೆ ಎಚ್ಚರಿಕೆ ವಹಿಸಲಾಗಿದೆ.

ಬೆಳಿಗ್ಗೆ 10.30ಕ್ಕೆ ಜೀವ ವಿಜ್ಞಾನ ಪರೀಕ್ಷೆ ಆರಂಭಗೊಂಡಿದೆ. ಮಧ್ಯಾಹ್ನ 2.30ರಿಂದ ಗಣಿತ, ಶುಕ್ರವಾರ ಬೆಳಿಗ್ಗೆ ಭೌತವಿಜ್ಞಾನ, ಮಧ್ಯಾಹ್ನ ರಸಾಯನ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಂಡಿರುವ ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಸಿಇಟಿಗೂ ಕೈಗೊಳ್ಳಲಾಗಿದೆ. ಯಾರಿಗಾದರೂ ಸೋಂಕು ಲಕ್ಷಣ ಕಾಣಿಸಿಕೊಂಡರೆ ಅವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು ಎಂದು ಡಿಡಿಪಿಯು ನಾಗರಾಜಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT