ಚನ್ನಗಿರಿ: ವಾಹನ ಸಂಚಾರ ಅಸ್ತವ್ಯಸ್ತ

7
ಕಾಂಗ್ರೆಸ್ ಪ್ರತಿಭಟನೆ

ಚನ್ನಗಿರಿ: ವಾಹನ ಸಂಚಾರ ಅಸ್ತವ್ಯಸ್ತ

Published:
Updated:
Deccan Herald

ಚನ್ನಗಿರಿ: ಕಾಂಗ್ರೆಸ್ ನೇತೃತ್ವದಲ್ಲಿ ರೈತ ಸಂಘ, ಕಟ್ಟಡ ಕಾರ್ಮಿಕರ ಸಂಘ ಹಾಗೂ ವಿವಿಧ ಸಂಘಟನೆಗಳು ಬಂದ್ ಅಂಗವಾಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.

ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ವಿರೋಧಿಸಿ ಪಟ್ಟಣದಲ್ಲಿ ಬಂದ್ ಆಚರಿಸಲಾಗುತ್ತಿದೆ ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ತಿಳಿಸಿದರು.

ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ  ಕಲ್ಲುಸಾಗರ ರಸ್ತೆ, ಗಣಪತಿ ವೃತ್ತ, ಮೇಲಿನ ಬಸ್ ನಿಲ್ದಾಣ, ನೃಪತುಂಗ ರಸ್ತೆಯ ಮೂಲಕ ಸಾಗಿ ತಹಶೀಲ್ದಾರ್ ಕಚೇರಿ ತಲುಪಿತು. ತಹಶೀಲ್ದಾರ್ ಎಚ್. ನಾಗರಾಜ್ ಅವರಿಗೆ ಮುಖಂಡರು ಮನವಿ ಸಲ್ಲಿಸಿದರು.

ಖಾಸಗಿ ಬಸ್‌ಗಳು ಸಂಪೂರ್ಣವಾಗಿ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಜನ ಸಂಚಾರ ವಿರಳವಾಗಿತ್ತು. ಆಟೊ ಚಾಲಕರ ಸಂಘದವರು ಬಸ್‌ನಿಲ್ದಾಣದಲ್ಲಿ ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿತ್ತು. ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ತಾಲ್ಲೂಕು ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ವೈ. ಶಿವರಾಜ್, ವಡ್ನಾಳ್ ಜಗದೀಶ್, ಜಬೀವುಲ್ಲಾ, ಸಿ. ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ. ಯೋಗೇಶ್, ರವಿಕುಮಾರ್, ಅಸ್ಲಾಂಬೇಗ್, ರಾಮಚಂದ್ರ ಪ್ರಜಾಪತ್, ವಿಜಯಕುಮಾರ್, ರೈತ ಸಂಘದ ಅಧ್ಯಕ್ಷ ಜಿ.ಎಸ್. ಚಂದ್ರಪ್ಪ, ಕಾರ್ಮಿಕರ ಸಂಘದ ಅಧ್ಯಕ್ಷ ಸೈಯದ್ ಗೌಸ್ ಪೀರ್ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !