ಚನ್ನಗಿರಿ: ಗ್ರಾಮ ಪಂಚಾಯಿತಿ ಕಚೇರಿಗೆ ಗುರುವಾರ ಮುತ್ತಿಗೆ ಹಾಕಿದ ಹಿರೇಮಳಲಿ ಗ್ರಾಮಸ್ಥರು, ಊರಿನಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಕೊಳವೆಬಾವಿಗಳಲ್ಲಿ ನಾಲ್ಕು ತಿಂಗಳಿಂದ ಅಂತರ್ಜಲ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ.

ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸಮಸ್ಯೆ ಪರಿಹರಿಸಲು ಪರ್ಯಾಯ ಮಾರ್ಗವನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.

‘ಗ್ರಾಮದ ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ತಾಲ್ಲೂಕು ಪಂಚಾಯಿತಿ ಇಒ ಅವರ ಗಮನಕ್ಕೆ ತರಲಾಗಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆಗಾಗಿ ಇಒ ಅವರಿಗೆ ಅನುಮತಿ ನೀಡುವಂತೆ ಕೇಳಲಾಗಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ಪಿಡಿಒ ಲತಾ ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಬಶಿರಾ ಬಾನು, ಸದಸ್ಯ ರುದ್ರೇಶ್, ಗ್ರಾಮಸ್ಥರಾದ ಪ್ರವೀಣ್, ಅರುಣ್, ನಾಗರಾಜ್, ಸುಧಾ, ಸುಮಾ, ಹೇಮಂತ್, ಸಿದ್ದೇಶ್, ತಿಪ್ಪೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.