ಚನ್ನಗಿರಿ: ‘ಸಮಾನತೆಯ ಹರಿಕಾರ, ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಏ. 27ರಂದು ಸಂಜೆ 6ಕ್ಕೆ ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವವನ್ನು ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜಯಂತ್ಯುತ್ಸವ ಸಮಿತಿ ಮುಖಂಡ ಕುಬೇಂದ್ರ ಸ್ವಾಮಿ ತಿಳಿಸಿದರು.

‘ಆ ದಿನ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಚಿತ್ರ ನಟ ಚೇತನ್ ಅಹಿಂಸಾ, ಮೈಸೂರಿನ ಅರ್ಜುನ ಅವಧೂತ, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಚಿತ್ರ ನಟ ದುನಿಯಾ ವಿಜಯ್, ಗಿಲ್ಲಿ ನಟ ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಅದೇ ದಿನ ಮಧ್ಯಾಹ್ನ 12ರಿಂದ ವಿವಿಧ ಕಲಾ ತಂಡಗಳೊಂದಿಗೆ ಅಂಬೇಡ್ಕರ್ ಪುತ್ಥಳಿಯನ್ನು ಅಲಂಕೃತ ವಾಹನದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಸಮಾರಂಭ ಯಾವುದೇ ಜಾತಿ, ಧರ್ಮ, ಮತ ಹಾಗೂ ರಾಜಕೀಯ ಪಕ್ಷಗಳಿಗೆ ಸೀಮಿತವಾಗಿಲ್ಲ. ಈ ಕಾರ್ಯಕ್ರಮದಲ್ಲಿ 5,000ದಿಂದ 8,000 ಜನ ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಜೆ.ದರ್ಶನ್, ಮಾಲತೇಶ್, ಹಟ್ಟಿ ಪ್ರಸನ್ನ, ಕಿರಣ್, ನಿಖಿಲ್, ಪ್ರೀತಮ್, ರಘು, ಗಿರೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-1239329497

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.