ಚನ್ನಗಿರಿ: ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ವತಿಯಿಂದ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಏ. 27ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಸವಾಪುರ ರಂಗನಾಥ ತಿಳಿಸಿದರು.

ಅಂದು ಮಧ್ಯಾಹ್ನ 2 ಗಂಟೆಯಿಂದ ವಿವಿಧ ಕಲಾ ತಂಡಗಳ ಮೇಳದೊಂದಿಗೆ ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳ ಮೆರವಣಿಗೆ ನಡೆಸಲಾಗುವುದು. ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮೈಸೂರಿನ ಅರ್ಜುನ ಅವಧೂತ ಗುರು ಮಹಾರಾಜ ಸ್ವಾಮೀಜಿ, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಶಾಸಕ ಬಸವರಾಜು ವಿ. ಶಿವಗಂಗಾ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಬೆಂಗಳೂರಿನ ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜೋಗತಿ ಮಂಜಮ್ಮ ಸೇರಿ ಹಲವು ಗಣ್ಯರು ಭಾಗವಹಿಸುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿ. ದರ್ಶನ್, ಮಹಾಂತೇಶ್, ಜಯಪ್ಪ, ಎಂ. ಪ್ರಸನ್ನ, ಅವಿನಾಶ್, ಕುಬೇಂದ್ರಸ್ವಾಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-43-1963800030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.