ಚನ್ನಗಿರಿ: ‘ಪುರಸಭೆಗೆ ಸೇರಿರುವ ಖಾಸಗಿ ಬಸ್ ನಿಲ್ದಾಣ ನವೀಕರಣ ಕಾಮಗಾರಿಗೆ ಈಗಾಗಲೇ ₹1.34 ಕೋಟಿ ಅನುದಾನ ಬಿಡುಗೆಯಾಗಿದ್ದು, ಕಾಮಗಾರಿ ಭರದಿಂದ ಸಾಗಿದೆ. ಇದೇ ಕಾಮಗಾರಿಗೆ ಮತ್ತೆ ಹೆಚ್ಚುವರಿಯಾಗಿ ₹60 ಲಕ್ಷ ಅನುದಾನ ಬಿಡುಗಡೆ ಮಾಡಿಸಲಾಗಿದೆ. ಬಸ್ ನಿಲ್ದಾಣವನ್ನು ಇನ್ನಷ್ಟು ನವೀಕರಣ ಮಾಡಲಾಗುವುದು’ ಎಂದು ಶಾಸಕ ಬಸವರಾಜು ಶಿವಗಂಗಾ ತಿಳಿಸಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ ಮಾತನಾಡಿದರು.

ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಆದಷ್ಟು ಶೀಘ್ರದಲ್ಲಿ ನಿರ್ಮಿಸಲು ಈಗಾಗಲೇ ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆ ಮಾಡಲಾಗಿದೆ. ಇನ್ನು ಸ್ವಲ್ಪ ದಿನಗಳಲ್ಲಿಯೇ ಬಸ್ ನಿಲ್ದಾಣ ನಿರ್ಮಾಣದ ಬಗ್ಗೆ ಸಿಹಿ ಸುದ್ದಿ ನೀಡಲಾಗುವುದು. ಅಲ್ಲಿಯವರೆಗೆ ಪಟ್ಟಣದ ಕೆರೆ ಎದುರಿಗೆ ಇರುವ ಜಾಗದಲ್ಲಿ ಚಿತ್ರದುರ್ಗ-ಬೀರೂರು-ಚಿಕ್ಕಮಗಳೂರು, ಮಡಿಕೇರಿ-ಹಾಸನ-ಧರ್ಮಸ್ಥಳ ಕಡೆಗೆ ಹೋಗುವ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳ ನಿಲುಗಡೆಗಾಗಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ನಿಂತುಕೊಳ್ಳುವುದಕ್ಕೆ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಲಾಗುವುದು ಎಂದರು.

ಹೊಂಡದ ಬಳಿ ಇರುವ ತಿಂಡಿ ಅಂಗಡಿಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಿ ಶಿವಮೊಗ್ಗ-ದಾವಣಗೆರೆ-ಭದ್ರಾವತಿ ಕಡೆಗೆ ಹೋಗುವ ಬಸ್ಗಳ ನಿಲುಗಡೆಗಾಗಿ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಲಾಗುವುದು. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣವಾದ ಬಳಿಕ ಮುಂಚೆ ಇದ್ದ ತಿಂಡಿ ಅಂಗಡಿಯವರಿಗೆ ಮತ್ತೆ ಅಂಗಡಿಗಳನ್ನು ಇಟ್ಟುಕೊಳ್ಳಲು ಜಾಗದ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗ್ಯಾರಂಟಿ ಅನುಷ್ಥಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್, ಕುಮಾರ್ ತಳವಾರ್, ಬಿ.ಎನ್. ರಾಜು, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಪಿ. ಮಹೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-43-226834367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.