ಚನ್ನಗಿರಿ: ತಾಲ್ಲೂಕಿನ ಚಿಕ್ಕ ಗಂಗೂರು ಗ್ರಾಮದ ಕೆರೆಯ ಬಳಿ ಶುಕ್ರವಾರ ಸಂಜೆ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ.

ಚಿರತೆಯಿಂದಾಗಿ ಗ್ರಾಮದ ಜನರು ಮನೆಗಳಿಂದ ಹೊರಗೆ ಬರಲು ಹೆದರುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥ ಚಿರಂಜೀವಿ ಒತ್ತಾಯಿಸಿದ್ದಾರೆ.

ಚಿಕ್ಕ ಗಂಗೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ತಿಳಿದು ಬಂದಿದೆ. ಈಗಾಗಲೇ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಚಿರತೆ ಸೆರೆಗೆ ಬೋನು ಅಳವಡಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಧುಸೂದನ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-43-1620394109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.