ಚನ್ನಗಿರಿ: ‘ಮಾನವೀಯ ಅಂತಃಕರಣಕ್ಕಿಂತ ತಾನೇ ದೊಡ್ಡಣ್ಣನಾಗಬೇಕೆಂಬ ಮನಃಸ್ಥಿತಿ ಇಂದಿನ ರಾಜಕೀಯ ನಾಯಕರಲ್ಲಿದೆ. ಹಾಗಾಗಿ ಭ್ರಷ್ಟಾಚಾರ ಎಲ್ಲ ಕ್ಷೇತ್ರಗಳಲ್ಲಿಯೂ ತಾಂಡವವಾಡುತ್ತಿದೆ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಜವಳಿ ಸಮುದಾಯ ಭವನದಲ್ಲಿ ಬಸವ ಬಳಗದ ತಾಲ್ಲೂಕು ಘಟಕದಿಂದ ಸೋಮವಾರ ನಡೆದ ಬಸವಣ್ಣನವರ 893ನೇ ಜಯಂತ್ಯುತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

‘ಪ್ರಾಮಾಣಿಕತೆ, ನೈತಿಕತೆ ಮಾಯ ವಾಗಿದೆ. ಸಾತ್ವಿಕರ ಮನಸ್ಸನ್ನು ಎಂದಿಗೂ ನೋಯಿಸಬಾರದು. ಬಸವಣ್ಣ ಜಗತ್ತಿನ ಶ್ರೇಷ್ಠ ಸಂತ ಎಂದು ಎಲ್ಲಿಯೂ ಹೇಳಿಕೊಳ್ಳಲಿಲ್ಲ. ಲೋಕಕ್ಕೆ ಬೆಳಕು ನೀಡಿದ ಅವರನ್ನು ಗೌರವಿಸಿದರೆ ಸಾಲದು. ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ. ಪ್ರಾಮಾಣಿಕತೆ, ನೈತಿಕತೆ ಹಾಗೂ ಶಿವ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

‘ಬಸವಣ್ಣನವರ ಆಚಾರ, ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಬಸವ ಬಳಗದಿಂದ ಬಸವ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನಕ್ಕೆ ಬೇಡಿಕೆ ಇಟ್ಟಿದ್ದರು. ಹಾಗಾಗಿ ಮುದ್ದೇನಹಳ್ಳಿ ಗ್ರಾಮದ ಬಳಿ ಒಂದು ಎಕರೆ ಜಮೀನು ಮಂಜೂರು ಮಾಡಿಸ ಲಾಗಿದೆ. ಹಾಗೆಯೇ ಭವನ ನಿರ್ಮಾಣಕ್ಕೆ ₹ 50 ಲಕ್ಷ ಅನುದಾನವನ್ನೂ ನೀಡಲಾಗುವುದು’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಆರ್.ಎಂ.ರವಿ, ಜಿ. ಬಸವರಾಜಪ್ಪ, ಎಂ. ರಾಜಪ್ಪ, ಸಿ.ಆರ್. ನಾಗೇಂದ್ರಪ್ಪ, ಗುರುಸಿದ್ದಯ್ಯ, ಮಂಜುಳಾ ಟಿ.ವಿ. ರಾಜು, ಧರಣೇಂದ್ರ ಕುಮಾರ್ ಉಪಸ್ಥಿತರಿದ್ದರು.

ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಬೆಂಗಳೂರಿನ ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕಿ ಎಂ.ಎಸ್. ಆಶಾದೇವಿ ಉಪನ್ಯಾಸ ನೀಡಿದರು. ಬಸವ ಬಳಗದ ಗೌರವಾಧ್ಯಕ್ಷ ಎಚ್.ಎಸ್. ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-972125481

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.