ಚನ್ನಗಿರಿ: 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ 120ರಿಂದ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕಸ್ತೂರಿ ಪ್ರಶಸ್ತಿ ಹಾಗೂ ಪದಕ ನೀಡಿ ಗೌರವಿಸಲು ತಾಲ್ಲೂಕಿನ ಕನ್ನಡ ಅಭಿಮಾನಿಗಳ ಬಳಗ ಮುಂದಾಗಿದೆ.

ಅರ್ಹ ವಿದ್ಯಾರ್ಥಿಗಳು 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿಯ ಪ್ರತಿಯೊಂದಿಗೆ ಮುಖ್ಯಶಿಕ್ಷಕರಿಂದ ದೃಢೀಕರಿಸಿ ಭರ್ತಿ ಮಾಡಿದ ಅರ್ಜಿಗಳನ್ನು ಅಭಿಮಾನಿ ಬಳಗದ ಅಧ್ಯಕ್ಷ ಎಸ್. ಶಂಕರಪ್ಪ ಅವರಿಗೆ ಸಲ್ಲಿಸಬೇಕು.

ತಾಲ್ಲೂಕಿನ ಪ್ರೌಢಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ 94493-28953 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.