ಚನ್ನಗಿರಿ: ಸರ್ಕಾರಿ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

‘ಈ ಆರೋಗ್ಯ ಕೇಂದ್ರದ ಬಗ್ಗೆ ನಮ್ಮ ಇಲಾಖೆಗೆ ಯಾವುದೇ ದೂರುಗಳು ಬಂದಿಲ್ಲ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಭೇಟಿ ನೀಡಿದ್ದೇವೆ. ಔಷಧಿಗಳ ದಾಸ್ತಾನು, ವಿವಿಧ ಉಪಕರಣಗಳು, ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಸಲಹೆ– ಸೂಚನೆಗಳನ್ನು ವೈದ್ಯರಿಗೆ ನೀಡಲಾಗಿದೆ. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗಬೇಕು ಎಂಬುದು ಇಲಾಖೆಯ ಉದ್ದೇಶವಾಗಿದೆ. ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಪಡೆಯಲು ಬರುವ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಖಾಸಗಿ ಔಷಧ ಕೇಂದ್ರಗಳಿಂದ ಔಷಧಿ ಖರೀದಿಸಲು ಚೀಟಿ ಬರೆದು ಕೊಡಬಾರದು’ ಎಂದು ಲೋಕಾಯುಕ್ತ ಸಿಪಿಐ ಮಧುಸೂದನ್ ತಿಳಿಸಿದರು.

ಆಡಳಿತ ವೈದ್ಯಾಧಿಕಾರಿ ಎಂ. ಚಂದ್ರಪ್ಪ, ತಾಲ್ಲೂಕು ವೈದ್ಯಾಧಿಕಾರಿ ಈ. ಶಿವಕುಮಾರ್, ಡಾ.ಅಶೋಕ್, ಡಾ.ಸತೀಶ್ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-43-1227368908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.