ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ: ಶಿಥಿಲಗೊಂಡಿದೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಕಟ್ಟಡ

ಹೊಸ ಕಟ್ಟಡ ನಿರ್ಮಿಸಲು ಗ್ರಾಮಸ್ಥರ ಆಗ್ರಹ
Published 15 ಏಪ್ರಿಲ್ 2024, 5:10 IST
Last Updated 15 ಏಪ್ರಿಲ್ 2024, 5:10 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ಹಿರೇಮಳಲಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಾರ್ವಜನಿಕ ಗ್ರಂಥಾಲಯದ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಕಾಯಕಲ್ಪ ನೀಡುವ ಅಗತ್ಯವಿದೆ.

ಈ ಗ್ರಂಥಾಲಯ ಕಟ್ಟಡವನ್ನು ನಿರ್ಮಿಸಿ ಸುಮಾರು 25ರಿಂದ 30ವರ್ಷಗಳು ಕಳೆದಿವೆ. ಕಟ್ಟಡದ ಚಾವಣಿ ಕಪ್ಪು ಹೆಂಚಿನಿಂದ ಕೂಡಿದ್ದು ಕಿಟಕಿ, ಬಾಗಿಲುಗಳು ಗೆದ್ದಲು ಹಿಡಿದಿವೆ. ಕಟ್ಟಡ ಯಾವಾಗ ಬೇಕಾದರೂ ಬೀಳುವ ಸಾಧ್ಯತೆ ಇದ್ದು,  ಜನರು ಆತಂಕದಲ್ಲಿದ್ದಾರೆ.

ಕಟ್ಟಡದ ಮುಂದೆ ಇರುವ ಜಾಗದಲ್ಲಿ ಕಲ್ಲುಗಳ ರಾಶಿ ಇದೆ. ಅನೇಕ ದಿನಗಳಿಂದ ಈ ಕಟ್ಟಡವನ್ನು ಉಪಯೋಗಿಸುತ್ತಿಲ್ಲ. ಪ್ರಸ್ತುತ ಗ್ರಾಮದಲ್ಲಿ ಸುಸಜ್ಜಿತ ಗ್ರಂಥಾಲಯ ಕಟ್ಟಡ ಇಲ್ಲ. ಗ್ರಂಥಾಲಯ ಕಟ್ಟಡ ಶಿಥಿಲಗೊಂಡಿದ್ದರೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಲೀ ಅಥವಾ ಅಭಿವೃದ್ಧಿ ಅಧಿಕಾರಿಗಳಾಗಲೀ ಈ ಬಗ್ಗೆ ಗಮನಹರಿಸಿಲ್ಲ. ಗ್ರಾಮದ ಜನರು ದಿನಪತ್ರಿಕೆಗಳನ್ನು ಓದಲು ಆಗದಂತಹ ಪರಿಸ್ಥಿತಿ ಇದೆ ಎಂದು ಸ್ಥಳೀಯರು ದೂರಿದರು.

ಗ್ರಂಥಾಲಯ ಕಟ್ಟಡ ಇಲ್ಲದೇ ಇರುವುದರಿಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಆವರಣದಲ್ಲಿ ಕುಳಿತು ದಿನಪತ್ರಿಕೆಗಳನ್ನು ಓದಬೇಕಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಸುಸಜ್ಜಿತ ಗ್ರಂಥಾಲಯ ಕಟ್ಟಡವನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ವಾಸಿ ಹನುಮಂತಪ್ಪ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT