ಚನ್ನಗಿರಿ: ತಾಲ್ಲೂಕು ಹಿರೇಮಳಲಿ ಗ್ರಾಮದ ಅರಣ್ಯ ಪ್ರದೇಶ ವ್ಯಾಪ್ತಿಯ ಸರ್ವೇ ನಂ. 37ರಲ್ಲಿ ತಿಂಗಳಿಂದ ಕೆಲವರು ಮಣ್ಣನ್ನು ಅಕ್ರಮವಾಗಿ ಅಗೆದು ಮಾರಾಟ ಮಾಡುತ್ತಿದ್ದರು. ಗ್ರಾಮವು ಮಾವಿನಕಟ್ಟೆ ವಲಯ ಅರಣ್ಯ ಪ್ರದೇಶ ವ್ಯಾಪ್ತಿಗೆ ಸೇರಿದ್ದು, ಇದುವರೆಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೇ ಇರುವುದರಿಂದ ಮಣ್ಣು ಮಾಫಿಯಾದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ ಎಂಬ ಬಗ್ಗೆ ಸಾರ್ವಜನಿಕರು ದೂರಿದ್ದರು.

ಏ. 9ರಂದು ‘ಪ್ರಜಾವಾಣಿ’ಯ ಕುಂದು ಕೊರತೆ ವಿಭಾಗದಲ್ಲಿ ‘ಹಿರೇಮಳಲಿ: ಅಕ್ರಮವಾಗಿ ಮಣ್ಣು ಅಗೆದು ಮಾರಾಟ’ ಶೀರ್ಷಿಕೆಯ ಅಡಿ ಪ್ರಕಟಗೊಂಡಿತ್ತು. ಈ ವಿಷಯದ ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ನಿಯಾಮಾನುಸಾರ ಪರಿಶೀಲಿಸಿ, ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಅನುಪಾಲನಾ ವರದಿಯನ್ನು ಅತಿ ಜರೂರಾಗಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-43-1275597407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.