ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಂಕಷ್ಟ: ಮುನಿಯಪ್ಪ

ಚನ್ನಗಿರಿ: ಹಿರೇಗಂಗೂರು ಗ್ರಾಮದಲ್ಲಿ 8 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ
Published 29 ಆಗಸ್ಟ್ 2023, 16:24 IST
Last Updated 29 ಆಗಸ್ಟ್ 2023, 16:24 IST
ಅಕ್ಷರ ಗಾತ್ರ

ಹಿರೇಗಂಗೂರು (ಚನ್ನಗಿರಿ): ‘ಕೇಂದ್ರದಲ್ಲಿ ಅಧಿಕಾರ ನಡೆಸುತ್ತರುವ ಬಿಜೆಪಿ ಸರ್ಕಾರದ ಬೆಲೆ ಏರಿಕೆಯಿಂದಾಗಿ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಸಂಕಷ್ಟಗಳನ್ನು ದೂರ ಮಾಡಲು ಮುಂದಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ KH ಮುನಿಯಪ್ಪ ತಿಳಿಸಿದರು.

ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿ 8 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.

‘ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡಲು ಹೊರಟಾಗ, ಚಿತ್ರದುರ್ಗದಲ್ಲಿ ಸಭೆ ನಡೆಸಿ, ಐಕ್ಯತಾ ಸಮಾವೇಶ ಮಾಡಿ, ಶೋಷಿತ ವರ್ಗ ಮುಂಚೂಣಿಗೆ ತರಲು ಪಣ ತೊಟ್ಟೆವು. ಇದರಿಂದ ದಲಿತ ಸಮುದಾಯ ಒಂದಾದ ಪರಿಣಾಮ, ಕಾಂಗ್ರೆಸ್ 135 ಸ್ಥಾನ ಪಡೆದುಕೊಂಡು ಅಧಿಕಾರ ನಡೆಸುವಂತಾಯಿತು’ ಎಂದರು.

‘ನಮ್ಮ ಸಮಾಜದ ಬಾಂಧವರು ದುಶ್ಚಟಗಳ ದಾಸರಾಗುವುದನ್ನು ಕೈ ಬಿಡಬೇಕು. ಶಾಮನೂರು ಕುಟುಂಬದ ಸಹಕಾರದಿಂದ, ದಲಿತ ವರ್ಗದ ಜಿಲ್ಲಾ ಪಂಚಾಯಿತಿ ಸದಸ್ಯ ಬಸವಂತಪ್ಪ ಅವರು ಇಂದು ಜನಪ್ರತಿನಿಧಿಯಾಗಲು ಸಾಧ್ಯವಾಗಿದೆ’ ಎಂದು ಹೇಳಿದರು.

ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ದಲಿತ ಸಮುದಾಯದವರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸುವ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು. ಚನ್ನಗಿರಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿಯವರಿಗೆ ಒಂದು ನಿವೇಶನ ನೀಡಿ, ಸಮುದಾಯ ಭವನವನ್ನು ನಿರ್ಮಿಸಿಕೊಡಲು ನೆರವಾಗುವಂತೆ ಶಾಸಕ ಬಸವರಾಜು ಶಿವಗಂಗಾ ಅವರಿಗೆ ಸೂಚಿಸಿದರು.

ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್. ಚಂದ್ರಪ್ಪ, ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜು ವಿ. ಶಿವಗಂಗಾ, ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ, ಪರಿಷತ್ ಸದಸ್ಯ ಡಿ.ಎಸ್. ಅರುಣ್ ಕುಮಾರ್, ಹೊದಿಗೆರೆ ರಮೇಶ್, ಕೆ.ಜಿ. ಬಸವಲಿಂಗಪ್ಪ, ಡಿಎಸ್ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ತಾಲ್ಲೂಕು ಸಂಚಾಲಕ ಚಿತ್ರಲಿಂಗಪ್ಪ, ಬಿ.ಎನ್. ವೀರೇಶ್ ನಾಯ್ಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT