ಚನ್ನಗಿರಿ: ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭೂಮಾಪಕರು ಮೂರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ತಾಲ್ಲೂಕಿನ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಭೂಮಾಪನ ಮಾಡುವಂತೆ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಆರ್. ರವಿಕುಮಾರ್ ಒತ್ತಾಯಿಸಿದರು.

‘ಭೂಮಾಪಕರ ಪ್ರತಿಭಟನೆಯಿಂದಾಗಿ ಸರ್ವೆ ಇಲಾಖೆಯಲ್ಲಿ ರೈತರ ಯಾವುದೇ ಕೆಲಸ ಆಗುತ್ತಿಲ್ಲ. ಸರ್ಕಾರ ಪೋಡಿ ಮುಕ್ತ, ಕಂದಾಯ ಗ್ರಾಮ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ಮಾಡಿದ್ದು, ಇದರಿಂದ ರೈತರಿಗೆ ತುಂಬಾ ಅನುಕೂಲವಾಗಲಿದೆ. ಆದರೆ ಭೂಮಾಪಕರು ಪ್ರತಿಭಟನೆ ನಡೆಸುತ್ತಿರುವುದರಿಂದ ರೈತರ ಯಾವ ಕೆಲಸಗಳೂ ಆಗುತ್ತಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ರಾಜ್ಯ ಸರ್ಕಾರ ಭೂಮಾಪಕರು ಕೆಲಸಕ್ಕೆ ಹಾಜರಾಗುವಂತೆ ಮಾಡಿ, ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪ್ರಭಾಕರ್, ಆಂಜನೇಯ, ಗಂಡು ಗಲಿ, ಬಸವರಾಜಪ್ಪ, ಪೀರಾನಾಯ್ಕ, ಮರಿಯಪ್ಪ, ಉಮೇಶ್, ಜ್ಞಾನೇಶ್, ತಿಪ್ಪೇರುದ್ರಪ್ಪ, ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-1835304625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.