ನಲ್ಲೂರು (ಚನ್ನಗಿರಿ): ‘ಮಾತೃಶ್ರೀ ಜ್ಞಾನವಿಕಾಸ ಗ್ರಾಮೀಣ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಆರಂಭಿಸಿರುವ ಪ್ರಮುಖ ಕಾರ್ಯಕ್ರಮವಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘದ ಯೋಜನಾಧಿಕಾರಿ ಅನ್ನಪೂರ್ಣ ತಿಳಿಸಿದರು.

ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘದಿಂದ ಗುರುವಾರ ನಡೆದ ನೂತನ ಮಾತೃಶ್ರೀ ಜ್ಞಾನವಿಕಾಸ ಕೇಂದ್ರದ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದುರ್ಬಲ ವರ್ಗದ ಮಹಿಳೆಯರಲ್ಲಿ ನಾಯಕತ್ವ ಗುಣ, ಆತ್ಮಸ್ಥೈರ್ಯ ಮತ್ತು ಆರ್ಥಿಕ ಸ್ವಾವಲಂಬನೆಯನ್ನು ಬೆಳೆಸುವುದು. ಕುಟುಂಬ ನಿರ್ವಹಣೆ, ಹಣಕಾಸು ವ್ಯವಹಾರಗಳ ಜ್ಞಾನ ಮತ್ತು ಸ್ವ– ಉದ್ಯೋಗ ಕೈಗೊಳ್ಳಲು ಅಗತ್ಯವಾದ ತರಬೇತಿ ನೀಡಲಾಗುವುದು. ಪೌಷ್ಟಿಕ ಆಹಾರದ ಮಹತ್ವ, ವೈಯಕ್ತಿಕ ಶುಚಿತ್ವ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ’ ಎಂದು ಹೇಳಿದರು.

‘ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಉಚಿತ ಟ್ಯೂಷನ್ ತರಗತಿಗಳು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದು ಹಾಗೂ ಪರಿಸರ ಪ್ರಜ್ಞೆ ಮತ್ತು ನಾಗರಿಕ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ಕಾಲ ಕಾಲಕ್ಕೆ ಸರಿಯಾಗಿ ಮಹಿಳೆಯರಿಗೆ ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಮಹಿಳೆಯರು ಈ ಜ್ಞಾನವಿಕಾಸ ಯೋಜನೆಯ ಸದುಪಯೋಗ ಪಡೆದುಕೊಂಡು ಮುಂದುವರಿಯಬೇಕು’ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಭಾಸ್ಕರ್, ಕೃಷಿ ಮೇಲ್ವಿಚಾರಕ ಹನುಮಂತಪ್ಪ, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಸವಿತಾ, ಸುಧಾ, ವಾಣಿಶ್ರೀ, ಗೀತಾ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಂಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-43-867437794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.