ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ: ಹದ ಮಳೆ, ರೈತರ ಸಂತಸ

Published 13 ಜೂನ್ 2024, 13:18 IST
Last Updated 13 ಜೂನ್ 2024, 13:18 IST
ಅಕ್ಷರ ಗಾತ್ರ

ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಈಗಾಗಲೇ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ಗುರುವಾರ ಪಟ್ಟಣ ಸೇರಿದಂತೆ ವಿವಿಧ ಭಾಗಗಳಲ್ಲಿ ಹದ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಮೆಕ್ಕೆಜೋಳ, ಹತ್ತಿ, ಹೆಸರು, ಉದ್ದು, ಅಲಸಂದೆ, ತೊಗರಿ, ಈರುಳ್ಳಿ, ರಾಗಿ, ತರಕಾರಿ ಮುಂತಾದ ಬೆಳೆಗಳನ್ನು ಬೆಳೆಯಲಾಗುತ್ತದೆ. ಈಗಾಗಲೇ ಬಿತ್ತನೆ ಕಾರ್ಯ ಆರಂಭಗೊಂಡಿದ್ದು, ರೈತರು ಹದ ಮಳೆಗಾಗಿ ಎದುರು ನೋಡುತ್ತಿದ್ದರು. ಅದರಂತೆ ಮಳೆರಾಯ ಧರೆಗಿಳಿದಿದ್ದು, ಕೃಷಿ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆಯಲು ನೆರವಾಗಿದೆ. ಈಗ ಬಿದ್ದಿರುವ ಮಳೆಯಿಂದಾಗಿ ಈಗಾಗಲೇ ಬಿತ್ತನೆ ಮಾಡಿರುವ ಬೆಳೆಗಳಿಗೆ ಅನುಕೂಲವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT