ಮಾನೋಮಟ್ಟಿ (ಚನ್ನಗಿರಿ): ‘ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಅಡಿ ಕ್ಷೇತ್ರದ ಮಾನೋಮಟ್ಟಿ, ಮರವಂಜಿ, ಆಗರಬನ್ನಿಹಟ್ಟಿ ಹಾಗೂ ಹಟ್ಟಿ ಗ್ರಾಮಗಳಲ್ಲಿ 11 ಶಾಲಾ ಕೊಠಡಿಗಳನ್ನು ₹ 1.56 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.

ತಾಲ್ಲೂಕಿನ ಮಾನೋಮಟ್ಟಿ ಗ್ರಾಮದಲ್ಲಿ ಗುರುವಾರ ನಡೆದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಕ್ಷೇತ್ರದಲ್ಲಿ ಆದ್ಯತೆಯ ಮೇರೆಗೆ ಸರ್ಕಾರಿ ಶಾಲೆಗಳಿಗೆ ಕೊಠಡಿ ನಿರ್ಮಿಸಲು ಬದ್ಧನಾಗಿದ್ದೇನೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಹೊಸ ಶಾಲಾ ಕೊಠಡಿಗಳು ನಿರ್ಮಾಣವಾದ ಮೇಲೆ ಆ ಕೊಠಡಿಗಳನ್ನು ಸದ್ಬಳಕೆ ಮಾಡಿಕೊಂಡು ಫಲಿತಾಂಶ ಅಧಿಕಗೊಳಿಸುವ ಕಡೆ ಶಿಕ್ಷಕರು ಗಮನಹರಿಸಬೇಕು’ ಎಂದರು.

‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ₹ 1 ಲಕ್ಷ ನಗದು ಬಹುಮಾನ ನೀಡಲಾಗುವುದು. ಆರ್ಥಿಕವಾಗಿ ಹಿಂದುಳಿದ ಯಾವ ವಿದ್ಯಾರ್ಥಿಗಳೇ ಇರಲಿ ಶೇ 95 ಅಂಕ ಪಡೆದವರಿಗೆ ಅಂತಹವರ ಮುಂದಿನ ವಿದ್ಯಾಭ್ಯಾಸದ ಖರ್ಚನ್ನು ವೈಯಕ್ತಿಕವಾಗಿ ಭರಿಸಲು ಸಿದ್ಧನಿದ್ದೇನೆ. ಕ್ಷೇತ್ರದಲ್ಲಿ ಉತ್ತಮ ಫಲಿತಾಂಶ ಬರಬೇಕೆನ್ನುವುದು ನನ್ನ ಉದ್ದೇಶ’ ಎಂದರು.

ತಿಪ್ಪಣ್ಣ, ಬಸವರಾಜು, ತಿರುವಭೋವಿ, ಗುರುವಭೋವಿ, ಅರುಣ್, ಅಜಯ್, ರುದ್ರೇಶ್, ಬಿಸಿಎಂ ಇಲಾಖೆ ಅಧಿಕಾರಿ ರವೀಂದ್ರ ಕುಮಾರ್ ಅಥರ್ಗಾ, ಬಿಇಒ ಎಲ್. ಜಯಪ್ಪ, ರವಿಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-1727395035

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.