ಚನ್ನಗಿರಿ: ‘ತಾಲ್ಲೂಕಿನ ವಡ್ನಾಳ್ ಗ್ರಾಮದ ವಿಶ್ವಕರ್ಮ ಮಹಾ ಸಂಸ್ಥಾನ ಸಾವಿತ್ರಿ ಪೀಠದಲ್ಲಿ ಏ. 19ರಂದು ಶಂಕರಾಚಾರ್ಯ ಸ್ವಾಮೀಜಿ ಸಂಸ್ಮರಣೋತ್ಸವ ಹಾಗೂ ಏ. 20ರಂದು ಶಂಕರಾತ್ಮಾನಂದ ಸ್ವಾಮೀಜಿ ಪಟ್ಟಾಭಿಷೇಕದ ಅಷ್ಟಮ ವರ್ಧಂತಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

‘ಮಠದ ಅಭಿವೃದ್ಧಿ, ಸದ್ಭಕ್ತರ ಶ್ರೇಯಸ್ಸಿಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಾವಿತ್ರಿ ದೇವಸ್ಥಾನದ ಅಡಿಗಲ್ಲು ಸಮಾರಂಭ ಹಾಗೂ ಸಾಮೂಹಿಕ ಉಪನಯನ ಕಾರ್ಯಕ್ರಮವನ್ನೂ ನಡೆಸಲಾಗುತ್ತದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಅರಕಲಗೂಡು ತಾಲ್ಲೂಕು ಅರೆಮಾದನಹಳ್ಳಿ ವಿಶ್ವಕರ್ಮ ಪೀಠದ ಶಿವಸುಜ್ಞಾನತೀರ್ಥ ಸ್ವಾಮೀಜಿ, ಉಡುಪಿ ಆನೆಗುಂದಿ ಮಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹಾಗೂ ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ನೇತೃತ್ವದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವಿಶ್ವಕರ್ಮ ಸಮಾಜದವರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಮಠದ ಸಲಹಾ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯಕಾರಿ ಸಮಿತಿ ಅಧ್ಯಕ್ಷ ಟಿ. ಮಹೇಂದ್ರಾಚಾರ್, ಕಾರ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್, ದೇವಸ್ಥಾನ ಸಮಿತಿ ಅಧ್ಯಕ್ಷ ಕಾಂತಾರಾಜಾಚಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-43-1128025940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.