ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ನಸುಕಿನ 5 ಗಂಟೆಯಿಂದ 8 ಗಂಟೆಯವರೆಗೆ ಜಡಿಮಳೆಯಾಗಿದೆ. ಇದು ರೈತರಲ್ಲಿ ನೆಮ್ಮದಿ ತಂದಿದ್ದು, ಮುಂಗಾರು ಹಂಗಾಮಿನ ಬಿತ್ತನೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಚನ್ನಗಿರಿಯಲ್ಲಿ 26 ಮಿ.ಮೀ., ದೇವರಹಳ್ಳಿ 18.2, ಕತ್ತಲಗೆರೆ 48, ತ್ಯಾವಣಿಗಿ 14.2, ಬಸವಾಪಟ್ಟಣ 19.9, ಜೋಳದಹಾಳ್ 9.8, ಸಂತೇಬೆನ್ನೂರು 13.4, ಉಬ್ರಾಣಿ 9.4 ಹಾಗೂ ಕೆರೆಬಿಳಚಿ ಗ್ರಾಮದಲ್ಲಿ 16.8 ಮಿ.ಮೀ. ಮಳೆಯಾಗಿದೆ.

ತಾಲ್ಲೂಕಿನಾದ್ಯಂತ ಕಳೆದ ಎರಡು–ಮೂರು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ಅಗತ್ಯವಾದ ರಸಗೊಬ್ಬರವನ್ನು ಖರೀದಿಸಿ ಮನೆಗಳಲ್ಲಿ ಸಂಗ್ರಹ ಮಾಡಿಟ್ಟುಕೊಳ್ಳುತ್ತಿದ್ದಾರೆ. ಕೃಷಿ ಚಟುವಟಿಕೆಗಳು ಬಿರುಸುಗೊಳ್ಳುತ್ತಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-1480363540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.