ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ: ಮೊಬೈಲ್ ಕಳವು ಪ್ರಕರಣ, 39 ಮೊಬೈಲ್ ಗಳ ವಿತರಣೆ

Published : 7 ಆಗಸ್ಟ್ 2024, 15:48 IST
Last Updated : 7 ಆಗಸ್ಟ್ 2024, 15:48 IST
ಫಾಲೋ ಮಾಡಿ
Comments

ಚನ್ನಗಿರಿ: ಕಳುವಾಗಿದ್ದ 39 ಮೊಬೈಲ್‌ಗಳನ್ನು ಪತ್ತೆಹಚ್ಚಿ, ವಾರಸುರದಾರರಿಗೆ ಬುಧವಾರ ಹಸ್ತಾಂತರಿಸಲಾಯಿತು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಗೆ ಮೊಬೈಲ್‌ಗಳನ್ನು ವಿತರಿಸಿದ ಡಿವೈಎಸ್ ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ, ಬೆಲೆಬಾಳುವ ಮೊಬೈಲ್‌ಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ತಿಳಿಸಿದರು.

ಚನ್ನಗಿರಿ ಠಾಣಾ ವ್ಯಾಪ್ತಿಯಲ್ಲಿ 26, ಬಸವಾಪಟ್ಟಣ ಠಾಣಾ ವ್ಯಾಪ್ತಿಯಲ್ಲಿ 10 ಹಾಗೂ ಸಂತೇಬೆನ್ನೂರು ಠಾಣಾ ವ್ಯಾಪ್ತಿಯಲ್ಲಿ 3 ಮೊಬೈಲ್‌ಗಳು ಕಳ್ಳತನವಾದ ಬಗ್ಗೆ ದೂರುಗಳು ದಾಖಲಾಗಿದ್ದವು. ಪೊಲೀಸ್ ಸಿಬ್ಬಂದಿ ತಂತ್ರಜ್ಞಾನದ ಸಹಾಯದಿಂದ 39 ಮೊಬೈಲ್‌ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದರು ಎಂದು ತಿಳಿಸಿದರು.

ಸಿಪಿಐ ಲಿಂಗನಗೌಡ ನೆಗಳೂರು, ಪಿಎಸ್ಐ ಗುರುಶಾಂತಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT