ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ: ಮಾಂಗಲ್ಯ ಸರ ಕಳ್ಳತನ

Published 12 ಜೂನ್ 2024, 14:36 IST
Last Updated 12 ಜೂನ್ 2024, 14:36 IST
ಅಕ್ಷರ ಗಾತ್ರ

ಚನ್ನಗಿರಿ: ಪಟ್ಟಣದ ಕಗತೂರು ರಸ್ತೆ ಸಮೀಪದ ಅಂಗಡಿಯಲ್ಲಿ ತರಕಾರಿ ಖರೀದಿಸಿ ಮನೆಗೆ ಮರಳುತ್ತಿರುವಾಗ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. 

‘ಮಂಗಳವಾರ ಅಂಗಡಿಯಿಂದ ಮನೆಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಳ್ಳರು ಕೊರಳಿಗೆ ಕೈ ಹಾಕಿ ₹1.09 ಲಕ್ಷ ಮೌಲ್ಯದ 35 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಬಸವೇಶ್ವರ ನಗರ ನಿವಾಸಿ ಉಮಾದೇವಿ ದೂರು ನೀಡಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT