ಚನ್ನಗಿರಿ: ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ವಾರದಿಂದ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ಭೂಮಿ ಉಳುಮೆ ಮಾಡುವ ಕಾರ್ಯದಲ್ಲಿ ರೈತರು ತೊಡಗಿದ್ದಾರೆ. ಇದರಿಂದ ಟ್ರ್ಯಾಕ್ಟರ್ಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ.

ಹಿಂದಿನ ದಿನಗಳಲ್ಲಿ ಎತ್ತುಗಳ ಮೂಲಕ ರೈತರು ಕೃಷಿ ಮಾಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ರೈತರು ಎತ್ತುಗಳನ್ನು ಸಾಕುವುದನ್ನು ಕೈ ಬಿಟ್ಟಿರುವುದರಿಂದ ಭೂಮಿ ಉಳುಮೆ ಕಾರ್ಯಕ್ಕೆ ಟ್ರ್ಯಾಕ್ಟರ್ಗಳನ್ನೇ ಅವಲಂಬಿಸಬೇಕಾಗಿದೆ. ಹೀಗಾಗಿ ಪೂರ್ವ ಮುಂಗಾರು ಆರಂಭವಾಯಿತು ಎಂದರೆ ಸಾಕು ಟ್ರ್ಯಾಕ್ಟರ್ಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತದೆ.

ತಾಲ್ಲೂಕಿನಲ್ಲಿ ಅಡಿಕೆ, ಭತ್ತದ ಬೆಳೆ ಬಿಟ್ಟರೆ ಮೆಕ್ಕೆಜೋಳ, ರಾಗಿ, ಅಲಸಂದೆ, ತೊಗರಿ, ಸೋಯಾಬಿನ್, ಅವರೆ, ಈರುಳ್ಳಿ, ಹಸಿ ಮೆಣಸಿನ ಕಾಯಿ, ತರಕಾರಿ ಮುಂತಾದ ಬೆಳೆಗಳನ್ನು ಬೆಳೆಯುತ್ತಾರೆ. ತಾಲ್ಲೂಕಿನ ಎಲ್ಲೆಡೆ ಐದಾರು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದ್ದು, ಭೂಮಿ ಉಳುಮೆ ಮಾಡಲು ಟ್ರ್ಯಾಕ್ಟರ್ಗಳಿಗೆ ಬೇಡಿಕೆ ಬಂದಿದೆ. ಇನ್ನು ಡಿಸೇಲ್ ದರ ಏರಿಕೆಯಿಂದಾಗಿ ಟ್ರ್ಯಾಕ್ಟರ್ಗಳ ಬಾಡಿಗೆ ದರವೂ ಹೆಚ್ಚಾಗಿದೆ. ಇದು ರೈತರಿಗೆ ದುಬಾರಿಯಾಗಿ ಪರಿಣಮಿಸಿದೆ.

‘ಕಳೆದ ವರ್ಷ ಟ್ರ್ಯಾಕ್ಟರ್ ಮೂಲಕ ಒಂದು ಎಕರೆ ಭೂಮಿ ಉಳುಮೆ ಮಾಡಲು ಗಂಟೆಗೆ ₹ 900ರಿಂದ ₹ 1,000 ಬಾಡಿಗೆಯನ್ನು ನಿಗದಿಪಡಿಸಿದ್ದರು. ಆದರೆ, ಈ ಬಾರಿ ಡಿಸೇಲ್ ದರ ಏರಿಕೆಯಾಗಿರುವುದರಿಂದ ಈ ದರ ₹1,200ಕ್ಕೆ ನಿಗದಿಪಡಿಸಿದ್ದಾರೆ. ಜತೆಗೆ ರಸಗೊಬ್ಬರಗಳ ಬೆಲೆಯೂ ಹೆಚ್ಚಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ’ ಎನ್ನುತ್ತಾರೆ ದೇವರಹಳ್ಳಿ ಗ್ರಾಮದ ರೈತ ರಂಗನಾಥ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-149052199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.