ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ವಾಚ್‌ ಮೇಲೆ ಐಸಿಸಿ ಕಣ್ಣು

Last Updated 25 ಮೇ 2018, 19:30 IST
ಅಕ್ಷರ ಗಾತ್ರ

ದುಬೈ: ಅಂಗಣದಲ್ಲಿ ಮತ್ತು ಡ್ರೆಸಿಂಗ್ ಕೊಠಡಿಯಲ್ಲಿ ಆಟಗಾರರು ಮತ್ತು ಅಧಿಕಾರಿಗಳು ಸಂವಹನ ಉಪಕರಣಗಳನ್ನು ಬಳಸುವುದನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ನಿಷೇಧಿಸಿದೆ.

ಕ್ರಿಕೆಟ್‌ನಲ್ಲಿ ಭ್ರಷ್ಟಾಚಾರ ತಡೆಯುವುದಕ್ಕಾಗಿ ತೆಗೆದುಕೊಂಡಿರುವ ಕ್ರಮಗಳ ಅಂಗವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಸ್ಮಾರ್ಟ್ ವಾಚ್‌ಗಳ ಮೇಲೆ ಹೆಚ್ಚಿನ ನಿಗಾ ಇರಿಸಿದೆ.

ಆಟಗಾರರು ಮತ್ತು ಅಧಿಕಾರಿಗಳು ಇರುವ ಪ್ರದೇಶಕ್ಕೆ ಸಂಬಂಧಿಸಿದ ನಿಯಮಾವಳಿಗಳಲ್ಲಿ ಈ ಅಂಶವನ್ನು ಸೇರಿಸಲಾಗಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

‘ಫೋನ್‌ ಅಥವಾ ವೈಫೈ ಜೊತೆ ಸಂಪರ್ಕ ಹೊಂದಿರುವ ಮತ್ತು ಮಾಹಿತಿಯನ್ನು ರವಾನಿಸಬಲ್ಲ ಸ್ಮಾರ್ಟ್‌ ವಾಚ್‌ಗಳನ್ನು ಧರಿಸುವಂತಿಲ್ಲ. ಅವುಗಳನ್ನು ತೆಗೆದುಕೊಂಡು ಬಂದರೆ ಕ್ರೀಡಾಂಗಣಕ್ಕೆ ಪ್ರವೇಶಿಸುವ ಮುನ್ನ ಫೋನ್‌ ಜೊತೆಯಲ್ಲಿ ಸಂಬಂಧಪಟ್ಟವರಿಗೆ ನೀಡಬೇಕು’ ಎಂದು ಸಮಿತಿ ತಾಕೀತು ಮಾಡಿದೆ.

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ದಿನವಾದ ಗುರುವಾರ ಸ್ಮಾರ್ಟ್ ವಾಚ್‌ಗಳನ್ನು ನಿಷೇಧಿಸಲಾಗಿತ್ತು. ಮ್ಯಾಚ್ ಫಿಕ್ಸಿಂಗ್‌ ಆರೋಪಗಳು ಕೇಳಿಬರದಂತೆ ಮಾಡುವುದು ಇದರ ಉದ್ದೇಶವಾಗಿತ್ತು. ಕಳೆದ ನವೆಂಬರ್‌ನಲ್ಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT