ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹ್ಯೂಬ್ಲೊ ವಾಚ್‌ ಪ್ರಕರಣ ವಿಚಾರಣೆ ಮುಂದಕ್ಕೆ

Last Updated 8 ಮೇ 2018, 19:38 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾ.ಗಿರೀಶ್ ಚಂದ್ರ ವರ್ಮ ದುಬಾರಿ ಬೆಲೆಯ ಹ್ಯೂಬ್ಲೊ ವಾಚ್ ಉಡುಗೊರೆ ನೀಡಿದ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ಈ ಅರ್ಜಿ ವಿಚಾರಣೆಗೆ ಬಂದಿತು. ಆದರೆ, ‘ಅರ್ಜಿಯ ತುರ್ತು ವಿಚಾರಣೆಗೆ ಅಗತ್ಯವಿಲ್ಲ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ವಿಚಾರಣೆಯನ್ನು ರಜಾಕಾಲದ ನಂತರಕ್ಕೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?: ‘ಉಡುಪಿಯ ಹಾಜಿ ಅಬ್ದುಲ್ ಅವರು, ₹ 250 ಕೋಟಿ ವೆಚ್ಚದಲ್ಲಿ ಹೆರಿಗೆ ಆಸ್ಪತ್ರೆಯನ್ನು ಹಾಗೂ ₹ 475 ಕೋಟಿ ವೆಚ್ಚದಲ್ಲಿ ಜೋಗ ಜಲಪಾತ ಪ್ರದೇಶ ಅಭಿವೃದ್ಧಿಪಡಿಸುವ ಸಂಬಂಧ ರಾಜ್ಯ ಸರ್ಕಾರ ಮತ್ತು ಉದ್ಯಮಿ ಬಿ.ಆರ್. ಶೆಟ್ಟಿ ನಡುವೆ ಒಪ್ಪಂದವಾಗಿದೆ. ಇದಕ್ಕೆ ಡಾ.ಗಿರೀಶ್ ಚಂದ್ರ ವರ್ಮ ಮಧ್ಯವರ್ತಿಯಾಗಿದ್ದಾರೆ. ಈ ಒಪ್ಪಂದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರಿಗೆ ದುಬಾರಿ ಮೌಲ್ಯದ ಹ್ಯೂಬ್ಲೊ ವಾಚ್ ಉಡುಗೊರೆ ನೀಡಲಾಗಿದೆ’ ಎಂದು ದೂರಲಾಗಿದೆ.

‘ಈ ಕುರಿತಂತೆ ನಾನು ಸಿಬಿಐ ನಿರ್ದೇಶಕರಿಗೆ ದೂರು ನೀಡಿದ್ದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ನಿರ್ದೇಶಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT