ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಸಂಚಾರ ಜಾಗೃತಿ ಮೂಡಿಸಿದ ನಟ ಚಿಕ್ಕಣ್ಣ

Published 18 ಜನವರಿ 2024, 8:17 IST
Last Updated 18 ಜನವರಿ 2024, 8:17 IST
ಅಕ್ಷರ ಗಾತ್ರ

ದಾವಣಗೆರೆ: ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಇಲ್ಲಿನ ದಕ್ಷಿಣ ಸಂಚಾರ ಪೊಲೀರಿಂದ ನಡೆದ ಜಾಗೃತಿ ಕಾರ್ಯಕ್ರಮಕ್ಕೆ ಚಿತ್ರ ನಟ ಚಿಕ್ಕಣ್ಣ ಚಾಲನೆ ನೀಡಿದರು.

ನೆಹರೂ ಯುವ ಕೇಂದ್ರ, ದಾವಣಗೆರೆ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದೀ ಕಾರ್ಯಕ್ರಮಕ್ಕೆ ತಮ್ಮ ನಟನೆಯ ‘ಉಪಾಧ್ಯಕ್ಷ’ ಚಿತ್ರದ ಪ್ರಚಾರಕ್ಕಾಗಿ ಆಗಮಿಸಿದ್ದ ವೇಳೆ ಚಾಲನೆ ನೀಡಿದರು.

‘ಎಲ್ಲಾ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬೈಕ್ ಸವಾರರು ಹೆಲ್ಮೆಟ್, ಕಾರು ಚಾಲಕರು ಸೀಟ್ ಬೆಲ್ಟ್‌ ಅನ್ನು ಕಡ್ಡಾಯವಾಗಿ ಧರಿಸಬೇಕು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು’ ಎಂದು ಸಲಹೆ ನೀಡಿದರು. 

ದಕ್ಷಿಣ ಸಂಚಾರ ಪಿಎಸ್ಐ ಶೈಲಜಾ, ಮಾಜಿ ಮೇಯರ್ ಬಿ.ಜಿ. ಅಜಯ್‌ಕುಮಾರ್, ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT