‘ಝೀರೊ’ ಎಫ್‌ಐಆರ್‌ಗೆ ಹಿಂದೇಟು
ಅಪರಾಧ ಕೃತ್ಯ ಎಲ್ಲಿಯೇ ನಡೆದಿದ್ದರೂ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಭಾರತೀಯ ನ್ಯಾಯ ಸಂಹಿತೆಯಲ್ಲಿ (ಬಿಎನ್‌ಎಸ್) ಅವಕಾಶವಿದೆ. ಇದಕ್ಕೆ ‘ಝೀರೊ ಎಫ್‌ಐಆರ್’ ಎಂಬ ಹೆಸರಿದೆ. ಪ್ರಕರಣ ದಾಖಲಿಸಲು ಸಂತ್ರಸ್ತರು ಅಲೆದಾಡಬಾರದು ಎಂಬ ಉದ್ದೇಶದಿಂದ ಈ ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಜಿಲ್ಲೆಯ ಪೊಲೀಸರು ‘ಝೀರೊ ಎಫ್‌ಐಆರ್’ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ‘ಲೈಂಗಿಕ ದೌರ್ಜನ್ಯ ಅತ್ಯಾಚಾರದಂತಹ ದೂರು ಹಿಡಿದು ಠಾಣೆಯ ಮೆಟ್ಟಿಲೇರುವ ಸಂತ್ರಸ್ತರನ್ನು ಪೊಲೀಸರು ಅನುಮಾನದಿಂದ ನೋಡುತ್ತಿದ್ದಾರೆ. ಕೃತ್ಯ ನಡೆದ ಸ್ಥಳದ ವ್ಯಾಪ್ತಿಯಲ್ಲಿರುವ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸುತ್ತಿದ್ದಾರೆ. ಇದರಿಂದ ಸಂತ್ರಸ್ತೆಯರಿಗೆ ತೊಂದರೆ ಆಗುತ್ತಿದೆ’ ಎಂದು ವಕೀಲರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.