ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಬೆನ್ನೂರು: ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸಾವು

Published 17 ಮಾರ್ಚ್ 2024, 16:03 IST
Last Updated 17 ಮಾರ್ಚ್ 2024, 16:03 IST
ಅಕ್ಷರ ಗಾತ್ರ

ಮಲೇಬೆನ್ನೂರು (ದಾವಣಗೆರೆ ಜಿಲ್ಲೆ): ಪಟ್ಟಣದಲ್ಲಿ ಈಚೆಗೆ ಬೀದಿಬದಿಯ ಅಂಗಡಿಯಲ್ಲಿನ ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾನೆ.

ಸ್ಥಳೀಯ ನೆಹರುನಗರ ಬಡಾವಣೆಯ ನಿವಾಸಿ ಇರ್ಫಾನ್ ಅವರ ಪುತ್ರ ಹಜರತ್ ಬಿಲಾಲ್ (6) ಮೃತ ಬಾಲಕ.

ಮಾರ್ಚ್‌ 13ರಂದು ಸಂಜೆ ರಂಜಾನ್‌ ಉಪವಾಸದ ನಂತರ ಜಾಮಿಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದ 19  ಮಕ್ಕಳು ಅಸ್ವಸ್ಥಗೊಂಡಿದ್ದರು. ಆ ಪೈಕಿ ಹಲವು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇನ್ನೂ ಕೆಲವು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT