ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಉಚ್ಚಂಗಿದುರ್ಗ: ಬಾಲ್ಯ ವಿವಾಹಕ್ಕೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಚ್ಚಂಗಿದುರ್ಗ: ಸಮೀಪದ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲ್ಯವಿವಾಹವನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಗ್ರಾಮವೊಂದರ ಬಾಲಕಿಯ ವಿವಾಹವನ್ನು ಅದೇ ಗ್ರಾಮದ ಯುವಕನೊಂದಿಗೆ ನಡೆಸಲು ಸಿದ್ಧತೆ ನಡೆದಿತ್ತು. ಈ ಕುರಿತು ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಮದುವೆ ಮನೆಗೆ ತೆರಳಿ ಬಾಲಕಿಯ ಶಾಲಾ ದಾಖಲೆಯನ್ನು ಪರಿಶೀಲಿಸಿದರು. ಈ ವೇಳೆ ಬಾಲಕಿಗೆ 17 ವರ್ಷ 4 ತಿಂಗಳು ಆಗಿರುವುದು ದೃಢಪಟ್ಟಿರುವುದರಿಂದ
ಮದುವೆ ನಿಲ್ಲಿಸಿದ್ದಾರೆ.

ಬಾಲ್ಯ ವಿವಾಹ ಮಾಡಿದರೆ ₹ 1 ಲಕ್ಷ ದಂಡ, ಒಂದು ವರ್ಷಕ್ಕೆ ಕಡಿಮೆಯಿಲ್ಲದಂತೆ ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯಾಗಲಿದೆ ಎಂದು ಪೋಷಕರಿಗೆ ಎಚ್ಚರಿಕೆ ನೀಡಿದರು. ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡರು.

ಕಾರ್ಯಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರತ್ನಮ್ಮ, ಪೊಲೀಸ್ ಸಿಬ್ಬಂದಿ ಚಿದಾನಂದ, ಅಂಗನವಾಡಿ ಕಾರ್ಯಕರ್ತೆ ಬಸಮ್ಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು