ನಲ್ಲೂರು (ಚನ್ನಗಿರಿ): ‘ಬಾಲ್ಯವಿವಾಹ ಸಾಮಾಜಿಕ ಪಿಡುಗು. ಅದನ್ನು ತಡೆಗಟ್ಟಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು. ಹೆಣ್ಣುಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಮುಂದಾಗಬೇಕು’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಮಾ ಶ್ರೀವತ್ಸ ತಿಳಿಸಿದರು.

ತಾಲ್ಲೂಕಿನ ನಲ್ಲೂರು ಗ್ರಾಮದ ಶಾದಿ ಮಹಲ್ನಲ್ಲಿ ಸೋಮವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ನಡೆದ ಬಾಲ್ಯವಿವಾಹ ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲ್ಯವಿವಾಹ ಏರ್ಪಡಿಸುವುದು, ಮಾಡಿಸುವುದು ಅಥವಾ ಅದರಲ್ಲಿ ಭಾಗವಹಿಸುವುದು ಶಿಕ್ಷಾರ್ಹ ಅಪರಾಧ. ಬಾಲ್ಯವಿವಾಹವು ಮಕ್ಕಳ ಮೇಲೆ ದೀರ್ಘಕಾಲೀನ ಋಣಾತ್ಮಕ ಪರಿಣಾಮ ಬೀರುತ್ತದೆ. ಅವರ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ’ ಎಂದು ಹೇಳಿದರು.

‘ಬಾಲ್ಯವಿವಾಹ ನಡೆಯುತ್ತಿದ್ದರೆ ಕೂಡಲೇ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಠಾಣೆ ಅಥವಾ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಹೆಸರನ್ನು ಗುಪ್ತವಾಗಿ ಇಡಲಾಗುತ್ತದೆ’ ಎಂದರು.

ವಕೀಲರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಆರ್.ಬಾಬುಜಾನ್, ಕಾರ್ಯದರ್ಶಿ ಎಂ.ಎಸ್.ಜಗದೀಶ್, ಖಚಾಂಚಿ ವಿ.ಎ. ಮಲ್ಲಿಕಾರ್ಜುನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಮಹಾರುದ್ರಪ್ಪ, ಉಪಾಧ್ಯಕ್ಷೆ ಚಂದ್ರಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್. ನಿರ್ಮಲಾ, ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ, ಪಿಡಿಒ ಕೆ.ಪಿ. ಜಯಪ್ರಕಾಶ್ ಉಪಸ್ಥಿತರಿದ್ದರು. ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.