ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಅರಿವು ಅಗತ್ಯ

Published : 26 ಸೆಪ್ಟೆಂಬರ್ 2024, 15:26 IST
Last Updated : 26 ಸೆಪ್ಟೆಂಬರ್ 2024, 15:26 IST
ಫಾಲೋ ಮಾಡಿ
Comments

ಬಸವಾಪಟ್ಟಣ: ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕು’ ಎಂದು ಚನ್ನಗಿರಿಯ ಸಮಗ್ರ ಶಿಶು ಅಭಿವೃದ್ಧಿ ಸಹಾಯಕ ಅಧಿಕಾರಿ ಶೈಲಾ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಗುರುವಾರ ಏರ್ಪಡಿಸಿದ್ದ ಆರೋಗ್ಯ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ಮಕ್ಕಳ ಮೇಲೆ ಲೈಂಗಿನ ದೌರ್ಜನ್ಯ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟಲು ಪೋಕ್ಸೊ ಕಾಯ್ದೆ ಜಾರಿಗೆ ತರಲಾಗಿದೆ. ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಟಿಯಿಂದ ನೋಡುವುದು, ಮುಟ್ಟುವುದು, ಸನ್ನೆ ಮಾಡುವುದು, ರೇಗಿಸುವುದು, ವಿವಿಧ ಆಮಿಷ ತೋರಿಸಿ ಏಕಾಂತ ಸ್ಥಳಕ್ಕೆ ಕರೆಯುವುದು ಸೇರಿದಂತೆ ದೈಹಿಕವಾಗಿ ಬಳಸಿಕೊಳ್ಳುವುದು ಘೋರ ಅಪರಾಧ.  ಇದು ಜಾಮೀನು ರಹಿತ ಶಿಕ್ಷೆಗೆ ಒಳಪಡುತ್ತದೆ’ ಎಂದು ಮಾಹಿತಿ ನೀಡಿದರು.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಸಿದ್ಧೇಶ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಜಿ.ಸಚಿನ್‌ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿಡಿಒ ಅನಿಲ್‌ಕುಮಾರ್‌, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಕಾರ್ಯದರ್ಶಿ ಹಬೀಬುಲ್ಲಾ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT