ಶನಿವಾರ, ಫೆಬ್ರವರಿ 29, 2020
19 °C

ಜ.23ರಂದು ಕಾಂಗ್ರೆಸ್‌ನಿಂದ ಚಿಂತನ–ಮಂಥನ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕಾಂಗ್ರೆಸ್ ವತಿಯಿಂದ ನಗರಪಾಲಿಕೆ ಕಾಂಗ್ರೆಸ್ ಸದಸ್ಯರಿಗೆ ಚಿಂತನ–ಮಂಥನ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮ ಜ.23ರಂದು ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರಾದ ಎಸ್‌.ಎಸ್.ಮಲ್ಲಿಕಾರ್ಜುನ, ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ರಘು ಆಚಾರ್, ಅಬ್ದುಲ್ ಜಬ್ಬಾರ್, ಮೋಹನ್ ಕೊಂಡಜ್ಜಿ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಪಾಲ್ಗೊಳ್ಳುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಯೂಬ್ ಪೈಲ್ವಾನ್ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

‘ಮಹಾನಗರ ಪಾಲಿಕೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳು, ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ವಾರ್ಡ್ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆ ಕುರಿತು ಚಿಂತನ-ಮಂಥನ ನಡೆಯಲಿದೆ’ ಎಂದು ಹೇಳಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುಧಾ ಚನ್ನಪ್ಪಗೌಡ, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಯೂಬ್ ಪೈಲ್ವಾನ್, ಕಿಸಾನ್‌ಸೆಲ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಗಂಗಾ ಬಸವರಾಜ್, ಕಾಂಗ್ರೆಸ್ ಮುಖಂಡರಾದ ಮುಜಾಯಿದ್, ಕುಬೇರಪ್ಪ, ಪ್ರವೀಣ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು