ಅರಿಶಿನಘಟ್ಟ (ಚನ್ನಗಿರಿ): ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘ ಜಾರಿಗೆ ತಂದಿರುವ ಜ್ಞಾನವಿಕಾಸ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಸಾಮಾಜಿಕ ಕಳಕಳಿ ಹೊಂದಿರುವ ಸಂಘವು ಮಹಿಳೆಯರಿಗೆ ವಿಮೆ ಕಾರ್ಡ್ಗಳನ್ನು ವಿತರಣೆ ಮಾಡುತ್ತಿದೆ’ ಎಂದು ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಕಮಲಾಕ್ಷ ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘದ ಚನ್ನಗಿರಿ ವಲಯದಿಂದ ಶುಕ್ರವಾರ ಅರಿಶಿನಘಟ್ಟ ಗ್ರಾಮದಲ್ಲಿ ನಡೆದ ವಿಮೆ ಕಾರ್ಡ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಕಾಲ ಕಾಲಕ್ಕೆ ಸಂಘದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಸಂಧ್ಯಾ ಸುರಕ್ಷಾ, ಆರೋಗ್ಯ ರಕ್ಷಾ ಮುಂತಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಸಾಲ ಸೌಲಭ್ಯ ಹಾಗೂ ಅವರ ಜೀವನಾಧಾರಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸಂಘದಲ್ಲಿರುವ ಸಿಬ್ಬಂದಿ ಪ್ರಾಮಾಣಿಕತೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡುತ್ತಿರುವುದು ಶ್ಲಾಘನೀಯ. ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸಬೇಕು’ ಎಂದು ಸಲಹೆ ನೀಡಿದರು.

ಚನ್ನಗಿರಿ ವಲಯ ಯೋಜನಾಧಿಕಾರಿ ಅನ್ನಪೂರ್ಣ, ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ರತ್ನಾ, ವಿಮೆ ಸಮನ್ವಯಾಧಿಕಾರಿ ರಾಜು, ಕೃಷಿ ಮೇಲ್ವಿಚಾರಕ ಕೆ. ಹನುಮಂತಪ್ಪ, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಸವಿತಾ, ಸೇವಾ ಪ್ರತಿನಿಧಿಗಳಾದ ವಾಣಿಶ್ರೀ, ಗೀತಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-43-2060763329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.