ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ ಜಿಲ್ಲೆಯಲ್ಲಿ 13 ಧಾರ್ಮಿಕ ಕೇಂದ್ರಗಳ ತೆರವು: ಡಿ.ಸಿ.

Last Updated 15 ಸೆಪ್ಟೆಂಬರ್ 2021, 4:38 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ 24 ಧಾರ್ಮಿಕ ಕಟ್ಟಡಗಳು ಸಾರ್ವಜನಿಕ ಸ್ಥಳಗಳಲ್ಲಿ ಇದ್ದು, ಈಗಾಗಲೇ 13 ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಾಕಿ ಇರುವ 11 ಕಟ್ಟಡಗಳು 2009ಕ್ಕಿಂತ ಮುಂಚೆ ನಿರ್ಮಾಣವಾಗಿದ್ದು, ದೇವಸ್ಥಾನಗಳ ಆಡಳಿತ ಮಂಡಳಿಯವರ ಜೊತೆ ಚರ್ಚಿಸಿ ಅವುಗಳನ್ನುಸ್ಥಳಾಂತರಗೊಳಿಸುವ ಇಲ್ಲವೇ ಸಕ್ರಮಗೊಳಿಸುವ ಕಾರ್ಯ ನಡೆಯಬೇಕಿದೆ’ ಎಂದು ತಿಳಿಸಿದರು.

‘ದಾವಣಗೆರೆಯಲ್ಲಿ 7, ಚನ್ನಗಿರಿಯಲ್ಲಿ 2, ಹರಿಹರ ತಾಲ್ಲೂಕಿನಲ್ಲಿ 2 ಸೇರಿ ಒಟ್ಟು 11 ಧಾರ್ಮಿಕ ಕಟ್ಟಡಗಳುಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣ ಮಾಡಿದ್ದು, 20 ದಿನಗಳೊಳಗೆ ಸಮೀಕ್ಷೆ ನಡೆಸಿ ಮಾಹಿತಿ ನೀಡುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT