ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಶಿಕ್ಷಣದ ವೆಚ್ಚ ಕಡಿತಗೊಳಿಸಲು ಚಿಂತನೆ: ಮುಖ್ಯಮಂತ್ರಿ

Last Updated 21 ಮಾರ್ಚ್ 2022, 8:09 IST
ಅಕ್ಷರ ಗಾತ್ರ

ದಾವಣಗೆರೆ: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕ ಕಡಿಮೆ ಇದ್ದರೂ ಖಾಸಗಿ ಕಾಲೇಜುಗಳಲ್ಲಿ ಅಧಿಕ ಶುಲ್ಕ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಶೇಕಡಾ 95 ಅಂಕ ಗಳಿಸಿದರೂ ನೀಟ್‌ನಲ್ಲಿ ಸೀಟ್ ಸಿಗದೆ ಇರುವ ಪರಿಸ್ಥಿತಿ ಇದೆ. ಅದಕ್ಕಾಗಿ ವಿದ್ಯಾರ್ಥಿಗಳು ಬೇರೆಬೇರೆ ದೇಶಗಳಿಗೆ ಕಲಿಯಲು ಹೋಗುತ್ತಿದ್ದಾರೆ. ಹಾಗಾಗಿ ನಮ್ಮಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಕಡಿಮೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

ಉಕ್ರೇನ್‌ನಿಂದ ಭಾರತಕ್ಕೆ ವಾಪಸಾಗಿರುವ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರವು ನಿರ್ಧಾರ ಕೈಗೊಳ್ಳಲಿದೆ. ಅಲ್ಲಿನ ಮತ್ತು ಇಲ್ಲಿನ ವೈದ್ಯಕೀಯ ಸಬ್ಜೆಕ್ಟ್ ಗಳು ಬೇರೆಯಾಗಿರುವುದರಿಂದ ಅವರು ಅಲ್ಲಿ ಕಲಿತರೂಇಲ್ಲಿ ಮತ್ತೊಮ್ಮೆ ಪರೀಕ್ಷೆ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.

ನ್ಯಾಷನಲ್ ಮೆಡಿಕಲ್ ಕೌನ್ಸಿಲ್‌ನಲ್ಲಿ ಕೂಡ ವೈದ್ಯಕೀಯ ವೆಚ್ಚದ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT