ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಕಿಪಾಕ್ಸ್ ತಡೆಗಟ್ಟಲು ಚರ್ಚೆ: ನಾಳೆ ಬೆಂಗಳೂರಿನಲ್ಲಿ ಸಿಎಂ ಸಭೆ

Last Updated 1 ಆಗಸ್ಟ್ 2022, 8:55 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ಸಂಬಂಧ ಚರ್ಚಿಸಲು ಆಗಸ್ಟ್ 2ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುವುದು, ಪ್ರಯೋಗಾಲಯಗಳ ಸ್ಥಾಪನೆಗಳ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ಔಷಧಗಳನ್ನು ಒದಗಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸರ್ಕಾರ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆ ಉದ್ದೇಶದ ಸರ್ಕಾರ ಯಾರಲ್ಲೂ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ. ಹಿಂದಿನ ಸರ್ಕಾರಗಳು ಏನೆಲ್ಲಾ ಮಾಡಿವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಗಳ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಕೊಲೆಗಡುಕರು ಯಾರೇ ಆಗಿರಲಿ ಅವರನ್ನು ಬಂಧಿಸಲಾಗುವುದು. ಬಿಜೆಪಿಯವರ ಪ್ರತಿಭಟನೆ ಈಗ ಕಡಿಮೆಯಾಗಿದೆ ಎಂದು ಬಿಜೆಪಿಯುವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಗೃಹ ಸಚಿವರ ನಿವಾಸದ ಬಳಿ ವ್ಯವಸ್ಥೆ ಸರಿಪಡಿಸಲಾಗಿದೆ. ಅಲ್ಲಿ ಭದ್ರತೆಗೆ ನಿಯೋಜಿಸಿದ್ದವರು ಇರಲಿಲ್ಲ. ಹೀಗಾಗಿ ತಾಕೀತು ಮಾಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT