ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಿಂದ ಅಸಮಾಧಾನಗೊಂಡ ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ. ಅವರಿಗೆ ಪರ್ಯಾಯ ಅವಕಾಶಗಳನ್ನು ಮಾಡಿಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಜನಪ್ರತಿನಿಧಿಗಳು ನಿಧನರಾದಾಗ ಸಾಮಾನ್ಯವಾಗಿ ಆ ಕುಟುಂಬದ ಸದಸ್ಯರಿಗೆ ಅವಕಾಶ ನೀಡುವುದು ಕಾಂಗ್ರೆಸ್ ವಾಡಿಕೆ. ಬಾಗಲಕೋಟೆ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೇಟಿ ಹಾಗೂ ಶಾಮನೂರು ಕುಟುಂಬದ ಸದಸ್ಯರಿಗೆ ಅವಕಾಶ ಮಾಕೊಡಲಾಗಿದೆ. ಇದು ಕುಟುಂಬ ರಾಜಕಾರಣದ ಪೋಷಣೆ ಅಲ್ಲ. ಕುಟುಂಬ ರಾಜಕಾರಣಕ್ಕೆ ಪ್ರೋತ್ಸಾಹ ಕೂಡ ನೀಡುತ್ತಿಲ್ಲ. ಗೆಲುವು ಮಾತ್ರವೇ ಮಾನದಂಡ’ ಎಂದು ಹೇಳಿದರು.

‘ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ. ರೈತರು, ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲ ಸಮುದಾಯವನ್ನು ಒಳಗೊಂಡ ಪಕ್ಷ ಕಾಂಗ್ರೆಸ್. ಮೂರು ವರ್ಷ ಅಧಿಕಾರದಲ್ಲಿದ್ದು, ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ದಾವಣಗೆರೆ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ’ ಎಂದರು.

‘ಪಕ್ಷದ ಹಿರಿಯ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿದ್ದರು. ದಾವಣಗೆರೆ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಏ.1 ಅಥವಾ 2ಕ್ಕೆ ಮತ್ತೆ ಪ್ರಚಾರಕ್ಕೆ ಬರುವೆ. ಆಗ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ಪಡೆಯುವೆ’ ಎಂದು ಆಶ್ವಾಸನೆ ನೀಡಿದರು.

ಎಚ್ಡಿಕೆ, ಬಸವರಾಜ ಬೊಮ್ಮಾಯಿ ಪುತ್ರರನ್ನೇ ಸೋಲಿಸಿಲ್ಲವೇ?:

ಲೋಕಸಭಾ ಚುನಾವಣೆಯ ಬಳಿಕ ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರರನ್ನೇ ಸೋಲಿಸಿಲ್ಲವೇ? ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಹೇಳಿದರು.

‘ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯಲಿವೆ. ಅಲ್ಪಸಂಖ್ಯಾತರು, ಬಡವರು ಕಾಂಗ್ರೆಸ್ ಜೊತೆಗೆ ಇದ್ದಾರೆ. ಬಿಜೆಪಿ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ವಾಸ್ತವ ಹೀಗಿರುವಾಗ ಉಪಚುನಾವಣೆಯನ್ನು ಬಿಜೆಪಿ ದಿಕ್ಸೂಚಿ ರೂಪಿಸಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ಪ್ರದೀಪ್ ಈಶ್ವರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.