ಗುರುವಾರ , ಮಾರ್ಚ್ 23, 2023
23 °C

₹ 6 ಲಕ್ಷ ದಂಡ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇ–ಚಲನ್‌ ದಂಡಕ್ಕೆ ಶೇ 50ರಷ್ಟು ರಿಯಾಯಿತಿ ಘೋಷಣೆ ಮಾಡಿರುವುದರಿಂದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಜನರು ಮುಗಿಬಿದ್ದಿದ್ದು, 4 ದಿನಗಳಲ್ಲಿ 2,400 ಪ್ರಕರಣ ಇತ್ಯರ್ಥಗೊಂಡಿದ್ದು, ₹ 6 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹವಾಗಿದೆ.

ಶೇ 50ರಷ್ಟು ರಿಯಾಯಿತಿ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಾರ್ವಜನಿಕರು ದಂಡವನ್ನು ಪಾವತಿಸುತ್ತಿದ್ದಾರೆ.

ಸಂಚಾರ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತವನ್ನು ನಗರದ ಉತ್ತರ, ದಕ್ಷಿಣ ಸಂಚಾರಿ ಪೊಲೀಸ್ ಠಾಣೆಗಳು, ಕರ್ನಾಟಕ ಒನ್ ಜಾಲತಾಣ, ದಾವಣಗೆರೆ ಒನ್, ಹಾಗೂ ಜಗಳೂರು, ಚನ್ನಗಿರಿ, ಹರಿಹರ, ಹೊನ್ನಾಳಿ, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಫೆ.11ರೊಳಗೆ ಪಾವತಿಸುವ ಮೂಲಕ ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ತಮ್ಮ ವಾಹನಗಳ ಮೇಲೆ ಸಂಚಾರಿ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸಿಕೊಳ್ಳಲು ‘ಸಂಚಾರಿ ಇ-ಚಲನ್ ಪಾವತಿ ಸ್ಥಳಗಳಲ್ಲಿ ಹಾಗೂ ಕರ್ನಾಟಕ ಒನ್ ಜಾಲತಾಣಕ್ಕೆ ಭೇಟಿ ನೀಡಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಶೇ 50ರ ರಿಯಾಯಿತಿಯ ಬಗ್ಗೆ ಸಂಚಾರಿ ಪೊಲೀಸರು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ’ ಎಂದು  ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.