ಲಾರಿಗೆ ಡಿಕ್ಕಿ: ಬೈಕ್ ಸವಾರ ಸಾವು

7

ಲಾರಿಗೆ ಡಿಕ್ಕಿ: ಬೈಕ್ ಸವಾರ ಸಾವು

Published:
Updated:

ಚನ್ನಗಿರಿ: ಪಟ್ಟಣದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಶನಿವಾರ ಸಂಜೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹೊದಿಗೆರೆ ಗ್ರಾಮದ ವಾಸಿಯಾದ ಎನ್. ನಾಗೇಂದ್ರಪ್ಪ(51) ಮೃತಪಟ್ಟವರು. ಚನ್ನಗಿರಿಯಿಂದ ಹೊದಿಗೆರೆ ಗ್ರಾಮಕ್ಕೆ ಹೋಗುತ್ತಿದ್ದಾಗ ಅಪಘಾತವಾಗಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗದ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !