ಜನತಾ ಪರಿವಾರದವರನ್ನು ಒಗ್ಗೂಡಿಸಿ: ಸಚಿವ ಶ್ರೀನಿವಾಸ್‌

7

ಜನತಾ ಪರಿವಾರದವರನ್ನು ಒಗ್ಗೂಡಿಸಿ: ಸಚಿವ ಶ್ರೀನಿವಾಸ್‌

Published:
Updated:
Deccan Herald

ದಾವಣಗೆರೆ: ಜೆಡಿಎಸ್‌ ಬಿಟ್ಟು ಹೋಗಿರುವ ಜನತಾ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಶ್ರೀನಿವಾಸ್‌ ಸಲಹೆ ನೀಡಿದರು.

ಜೆಡಿಎಸ್‌ ಕಚೇರಿಗೆ ಗುರುವಾರ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚಿಸಿದ ಅವರು, ‘ಜಿಲ್ಲೆಯಲ್ಲಿ ಪಕ್ಷವನ್ನು ಭೂತ್‌ ಮಟ್ಟದಿಂದ ಬಲಿಷ್ಠಗೊಳಿಸಬೇಕು. ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಾಗರಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ’ ಎಂದು ಭರವಸೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲಾ ಕಾರ್ಯಕರ್ತರು, ಮುಖಂಡರು ಪಣ ತೊಡಬೇಕು ಎಂದರು.

ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿ ಶಂಕರ್‌ ಸ್ವಾಗತಿಸಿದರು. ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಘಟಕದ ಅಧ್ಯಕ್ಷ ಬಿ. ಚಿದಾನಂದಪ್ಪ, ರಾಜ್ಯ ಪರಿಶಿಷ್ಟ ಪಂಗಡದ ಅಧ್ಯಕ್ಷ ಹೊದಿಗೆರೆ ರಮೇಶ್‌, ಜಿಲ್ಲಾ ಕಾರ್ಯಾಧ್ಯಕ್ಷ ಗಣೇಶ್‌ ಡಿ. ದಾಸಕರಿಯಪ್ಪ, ಹರಪನಹಳ್ಳಿ ಪರಮೇಶಪ್ಪ, ಜೆ. ಅಮಾನುಲ್ಲಾಖಾನ್‌, ಎನ್‌. ಕೊಟ್ರೇಶ್‌, ಜಗಳೂರು ಗುರುಸಿದ್ದಪ್ಪ, ದೇವೇಂದ್ರಪ್ಪ, ಹೊನ್ನಾಳಿ ಘಟಕದ ಅಧ್ಯಕ್ಷ ವೆಂಕಟೇಶ್‌, ಹರಿಹರ ಘಟಕದ ಅಧ್ಯಕ್ಷ ಬಂಡೇರು ತಿಮ್ಮಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎ. ಪಾಪಣ್ಣ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !