ಸಾಸ್ವೆಹಳ್ಳಿ: ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ವ್ಯಕ್ತಿಯೊಬ್ಬ ಶಿವನ ಭಾವಚಿತ್ರವಿರುವ ಫ್ಲೆಕ್ಸ್ಗೆ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ನಡೆದಿದ್ದು, ಶನಿವಾರ ಬೆಳಿಗ್ಗೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹೊನ್ನಾಳಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಗ್ರಾಮದ ಸುಹೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

‘ಸೋಮವಾರ ಗ್ರಾಮದ ಕಲ್ಲೇಶ್ವರ ಸ್ವಾಮಿಯ ಕಾರ್ತಿಕ ದೀಪೋತ್ಸವದ ಪ್ರಯುಕ್ತ ಗ್ರಾಮದ ಅಗಸೆ ಬಾಗಿಲಿಗೆ ಹೊಂದಿಕೊಂಡಂತೆ ಕಲ್ಲೇಶ್ವರ ದೇವಸ್ಥಾನದ ಸದಸ್ಯರು ಈಶ್ವರ ದೇವರ ಭಾವಚಿತ್ರದ ಫ್ಲೆಕ್ಸ್ ಅನ್ನು ಶುಕ್ರವಾರ ಸಂಜೆ ಕಟ್ಟುವಾಗ, ಗ್ರಾಮದ ಸುಹೀಲ್, ಅಶ್ರು, ರಿಹಾನ್ ಸೇರಿದಂತೆ ಕೆಲವರು ಶಿವನ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ತಕರಾರು ಮಾಡಿದ್ದರು’ ಎಂದು ಕಲ್ಲೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಸಿದ್ದಪ್ಪ ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಅನ್ಯ ಕೋಮಿನವರು ಫ್ಲೆಕ್ಸ್ಗೆ ಬೆಂಕಿ ಹಚ್ಚಿ ಗ್ರಾಮದ ಶಾಂತಿ ಹಾಳುಗೆಡವುತ್ತಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಅಗಸೆ ಬಾಗಿಲ ಮುಂದೆ ನೆಡಲಾಗಿದ್ದ ಅನ್ಯಕೋಮಿನ ಧ್ವಜವನ್ನು ತೆಗೆಯುವಂತೆ ಪಟ್ಟು ಹಿಡಿದ ಕಾರಣ ಗ್ರಾಮಸ್ಥರು ಆ ಧ್ವಜವನ್ನು ತೆರವುಗೊಳಿಸಿದರು.

ಬಳಿಕ ರೇಣುಕಾಚಾರ್ಯ ಮಾತನಾಡಿ, ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮು ಸೌಹಾರ್ದದ ನೆಪದಲ್ಲಿ ಹಿಂದೂಗಳನ್ನು ಹತ್ತಿಕ್ಕಲೆಂದೇ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಗ್ರಾಮದಲ್ಲಿ ನಡೆದ ದುಷ್ಕೃತ್ಯದಲ್ಲಿ ಭಾಗಿಯಾದ ಕಿಡಿಗೇಡಿಗಳ ಮೇಲೆ ರಕ್ಷಣಾ ಇಲಾಖೆ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಚನ್ನಗಿರಿ ಉಪವಿಭಾಗದ ಡಿವೈಎಸ್ಪಿ ಶ್ಯಾಮ್ ವರ್ಗೀಸ್ ಮತ್ತು ಹೊನ್ನಾಳಿ ಪಿಐ ಸುನಿಲ್ ಕುಮಾರ್ ಅವರ ತಂಡ ಸ್ಥಳದಲ್ಲಿ ಎರಡು ಕೋಮುಗಳ ಮಧ್ಯೆ ಉಂಟಾಗಿದ್ದ ಬಿಗುವಿನ ವಾತಾವರಣವನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.