ದಾವಣಗೆರೆ: ಪೊಲೀಸರು ಜನರೊಂದಿಗೆ ನಿಕಟ ಒಡನಾಟ ಇಟ್ಟುಕೊಂಡಾಗ ಅಪರಾಧ ಪ್ರಕರಣ ನಿಯಂತ್ರಣ ಸಾಧ್ಯ. ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾದಂತೆ ಅಪರಾಧ ಕೃತ್ಯಗಳಿಗೆ ಕಡಿವಾಣ ಬೀಳುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ‘ಮನೆ-ಮನೆಗೆ ಪೊಲೀಸ್ ಮಿತ್ರಪಡೆ, ಪೊಲೀಸ್ ನಡೆ ಸಮುದಾಯದ ಕಡೆ’ಗೆ ಚಾಲನೆ ನೀಡಿ ಮಾತನಾಡಿದರು.

‘2ನೇ ಮಹಾಯುದ್ಧದ ಪರಿಣಾಮವಾಗಿ ಪೊಲೀಸರ ಬಗ್ಗೆ ಜರ್ಮನಿಯ ಜನರಲ್ಲಿ ಕೆಟ್ಟ ಭಾವನೆ ಇತ್ತು. ಇದನ್ನು ಹೋಗಲಾಡಿಸಲು ಆ ದೇಶಕ್ಕೆ 40 ವರ್ಷ ಹಿಡಿಯಿತು. ಅಲ್ಲಿ ಕೈಗೊಂಡ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಅಧ್ಯಯನಕ್ಕೆ ಅಧಿಕಾರಿಗಳ ತಂಡವನ್ನು ಜರ್ಮನಿಗೆ ಕಳುಹಿಸಲಾಗಿತ್ತು. ಪೊಲೀಸ್ ಠಾಣೆ, ತರಬೇತಿ ಕೇಂದ್ರ ಹಾಗೂ ಆಡಳಿತ ಕಚೇರಿಗಳಿಗೆ ತಂಡ ಭೇಟಿ ನೀಡಿ ಅಧ್ಯಯನ ನಡೆಸಿದೆ’ ಎಂದು ಹೇಳಿದರು.

‘ಒಂಟಿ ಮಹಿಳೆ, ಏಕ ಪೋಷಕತ್ವದ ಮಕ್ಕಳು ಇರುವ ಮನೆಗಳಲ್ಲಿ ನಡೆಯುವ ಅಪರಾಧ ಪ್ರಕರಣಗಳು ಗಮನಕ್ಕೆ ಬರುವುದು ಕಡಿಮೆ. ಯಾವ ಮನೆಯಲ್ಲಿ ಏನು ನಡೆಯುತ್ತದೆ ಎಂಬುದನ್ನು ಪತ್ತೆ ಮಾಡುವುದು ಕಷ್ಟವಿತ್ತು. ಮನೆ–ಮನೆಗೆ ಪೊಲೀಸ್ ವ್ಯವಸ್ಥೆ ರೂಪಿಸಿದ್ದರಿಂದ ಪ್ರತಿ ಕಾನ್ಸ್ಟೆಬಲ್ 50ಕ್ಕೂ ಹೆಚ್ಚು ಮನೆಗಳ ಮೇಲೆ ನಿಗಾ ಇಡುತ್ತಾರೆ. ಈ ಕುಟುಂಬಗಳ ಜತೆಗೆ ನಿಕಟ ಸಂಪರ್ಕ ಬೆಳೆಸಿಕೊಳ್ಳುತ್ತಾರೆ’ ಎಂದು ಹೇಳಿದರು.

‘ಸೈಬರ್ ಅಪರಾಧ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಬ್ಯಾಂಕ್ ಖಾತೆಗಳಿಂದ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಸೈಬರ್ ಅಪರಾಧಿಗಳು ಈ ಕೃತ್ಯದಲ್ಲಿ ನಿಪುಣರಾಗಿದ್ದಾರೆ. ತರಬೇತಿ ಪಡೆದ ನುರಿತ ಪೊಲೀಸರ ಸಂಖ್ಯೆ ಕಡಿಮೆ ಇದೆ. ಸೈಬರ್ ಅಪರಾಧ ತಡೆಗೆ ಎಲ್ಲ ಪೊಲೀಸರಿಗೆ ತರಬೇತಿ ನೀಡುವ ಅಗತ್ಯವಿದೆ’ ಎಂದರು.

‘ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಪೊಲೀಸ್ ಠಾಣೆಗಳಿವೆ. ಈ ಎಲ್ಲ ಠಾಣೆಗಳ ಮೇಲೆ ನಿಗಾ ಇಡಲು ಜಿಲ್ಲಾ ಮಟ್ಟದಲ್ಲಿ ಕಮಾಂಡ್ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಕಮಾಂಡ್ ಕೇಂದ್ರದ ಮೂಲಕ ಯಾವ ಠಾಣೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಹಿರಿಯ ಅಧಿಕಾರಿಗಳು ಗಮನಿಸಲು ಸಾಧ್ಯವಿದೆ’ ಎಂದು ಹೇಳಿದರು.

ಪೂರ್ವ ವಲಯ ಐಜಿಪಿ ಆರ್. ರವಿಕಾಂತೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ವರಿಷ್ಠಾಧಿಕಾರಿಗಳಾದ ಪರಮೇಶ್ವರ ಹೆಗಡೆ, ಜಿ.ಮಂಜುನಾಥ್ ಹಾಜರಿದ್ದರು.

‘ವಸತಿ ಸೌಲಭ್ಯ ಹೆಚ್ಚಳ’

‘ಮುಂದಿನ ಮೂರು ವರ್ಷಗಳಲ್ಲಿ ಪೊಲೀಸರ ವಸತಿ ಸೌಲಭ್ಯವನ್ನು ಶೇ 70ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ‘ಅಧಿಕಾರಿಗಳು ಹಾಗೂ ಕಾನ್ಸ್ಟೆಬಲ್ ಸೇರಿ ಶೇ 40ರಷ್ಟು ಪೊಲೀಸರಿಗೆ ಮಾತ್ರ ವಸತಿ ಸೌಲಭ್ಯವಿದೆ. ಎಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ. ಪ್ರತಿ ವರ್ಷವೂ ವಸತಿ ಗೃಹಗಳ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

ಕಾನ್ಸ್ಟೆಬಲ್ ಟೋಪಿಯನ್ನು ಮಳೆಗಾಲದಲ್ಲಿ ಬಳಕೆ ಮಾಡಲು ಕೆಲ ಸಮಸ್ಯೆಗಳಿವೆ. ಇದನ್ನು ಗಮನಿಸಿ ಟೋಪಿ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ
-ಜಿ.ಪರಮೇಶ್ವರ, ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.