ಗುರುವಾರ , ಡಿಸೆಂಬರ್ 3, 2020
18 °C

ಎಸ್‌ಪಿಬಿಗೆ ಹಾಡುಗಳಿಂದ ಶ್ರದ್ಧಾಂಜಲಿ ಅರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಮಹಾನ್ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರೇಮ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಶನಿವಾರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಎಸ್‌ಪಿಬಿ ಅವರು ದೇಶದ ಬಹುತೇಕ ಭಾಷೆಗಳನ್ನು ಕರಗತ ಮಾಡಿಕೊಂಡು ಆಯಾ ಭಾಷೆಗಳನ್ನು ಅರ್ಥ ಮಾಡಿಕೊಂಡು ಹಾಡುವುದರ ಮೂಲಕ ಜನರಯ ಮೆಚ್ಚಿನ ಗಾಯಕರಾಗಿದ್ದರು. ರಾಜ್ಯ ಸರ್ಕಾರ ಎಸ್‌ಪಿಬಿ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಗಾಯಕರಾದ ಸುರೇಶ್ ಕೆ., ಜೀವನ್, ಕೆ. ವಾಗೀಶ್, ಜೂನಿಯರ್ ವಿಷ್ಣುವರ್ಧನ್ ಪರಮೇಶ್, ಸುದರ್ಶನ್, ಕಾಂತರಾಜ್, ನಾಟಕ ಕಲಾವಿದರ ದುರುಗೇಶ್, ಪರಶುರಾಮ್ ಅವರೂ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು