ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ‘ಚೊಂಬು’ ಪ್ರತಿಭಟನೆ

Published 27 ಏಪ್ರಿಲ್ 2024, 15:50 IST
Last Updated 27 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

ದಾವಣಗೆರೆ: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ತೆರಿಗೆ ಪಾಲು ಸೇರಿದಂತೆ ಯಾವುದೇ ಕೊಡುಗೆ ನೀಡದೆ ‘ಚೊಂಬು’ ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಶನಿವಾರ ನಗರದಲ್ಲಿ ‘ಚೊಂಬು’ ಹಿಡಿದು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್‌ಗೆ ಭಾರತ ಕಮ್ಯುನಿಷ್ಟ್‌ ಪಕ್ಷ (ಸಿಪಿಐ) ಸಾಥ್‌ ನೀಡಿತು. ನಗರದ ಅಂಬೇಡ್ಕರ್‌ ಸರ್ಕಲ್‌ನಿಂದ ಜಯದೇವ ವೃತ್ತದ ಮಾರ್ಗವಾಗಿ ಉಪವಿಭಾಗಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಸಿಪಿಐ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ಕೊಡದೇ ಸತಾಯಿಸುತ್ತಿದ್ದು, ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿದೆ. ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ನಂತರ ಎಚ್ಚೆತ್ತುಕೊಂಡಿದೆ. ರಾಜ್ಯದ ಪಾಲನ್ನೂ ಕೇಳಲು ‘ಸುಪ್ರೀಂ’ ನ್ಯಾಯದ ಮೊರೆ ಹೋಗಬೇಕಾದದ್ದು ವಿಪರ್ಯಾಸ. ಇಂತಹ ಸರ್ಕಾರ ಏಕೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಅವರು ರಾಜ್ಯಕ್ಕೆ ಮತ್ತು ದಾವಣಗೆರೆ ಜಿಲ್ಲೆಗೆ ಕೊಟ್ಟಿರುವುದು ಕೇವಲ ‘ಚೊಂಬು’ ಎಂದು ಚೊಂಬು ಪ್ರದರ್ಶನ ಮಾಡಿದರು. ಬಳಿಕ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮುಖಂಡರಾದ ಗಡಿಗುಡಾಳ್ ಮಂಜುನಾಥ್, ಎ. ನಾಗರಾಜ್, ಅನಿತಾ ಬಾಯಿ ಮಾಲತೇಶ್‌, ಡಿ. ಬಸವರಾಜ್‌, ಕೆ.ಜಿ. ಶಿವಕುಮಾರ್‌ ಸೇರಿದಂತೆ ನೂರಾರು ಕಾರ್ಯಕರ್ತರು, ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಸಹ ಕಾರ್ಯದರ್ಶಿಗಳಾದ ಎಚ್.ಜಿ. ಉಮೇಶ್, ಆವರಗೆರೆ ವಾಸು, ಮುಖಂಡರಾದ ಬಿ. ಚಿನ್ನಪ್ಪ, ನಿಟುವಳ್ಳಿ ಬಸವರಾಜ್, ಕೆ.ಬಾನಪ್ಪ, ಎಂ.ಬಿ. ಶಾರದಮ್ಮ, ವಿಶಾಲಾಕ್ಷಿ ಮೃತ್ಯುಂಜಯ, ದ್ರಾಕ್ಷಾಯಿಣಿ ಭಾಗವಹಿಸಿದ್ದರು.

ರಾಜ್ಯಕ್ಕೆ ಕೇಂದ್ರ ಸರ್ಕಾರ ‘ಚೊಂಬು’ ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು
ರಾಜ್ಯಕ್ಕೆ ಕೇಂದ್ರ ಸರ್ಕಾರ ‘ಚೊಂಬು’ ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT