ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ: ರಾಜ್ಯಪಾಲರ ಅಣಕು ಶವಯಾತ್ರೆ ನಡೆಸಿ ಕಾಂಗ್ರೆಸ್ ಪ್ರತಿಭಟನೆ

Published 19 ಆಗಸ್ಟ್ 2024, 8:11 IST
Last Updated 19 ಆಗಸ್ಟ್ 2024, 8:11 IST
ಅಕ್ಷರ ಗಾತ್ರ

ದಾವಣಗೆರೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಣಕು ಶವಯಾತ್ರೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ, ಜೆಡಿಎಸ್ ನಾಯಕರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಥಾವರಚಂದ್ ಗೆಹಲೋತ್ ಅವರ ಪ್ರತಿಕೃತಿ ನಿರ್ಮಿಸಿ ಹೆಗಲಮೇಲೆ ಹೊತ್ತು ಮಂಡಕ್ಕಿ ತೂರಿದರು. ಅಂಬೇಡ್ಕರ್ ವೃತ್ತದಿಂದ ಗಾಂಧಿ ವತ್ತದವರೆಗೆ ಮೆರವಣಿಗೆ ನಡೆಸಿದರು. ಅಣಕು ಶವ ಸುಡಲು ಮುಂದಾದ ಪ್ರತಿಭಟನಕಾರರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಯಿತು.

‘ಮುಖ್ಯಮಂತ್ರಿ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಿದ ರಾಜ್ಯಪಾಲರ ಕ್ರಮ ಸೇಡಿನಿಂದ ಕೂಡಿದೆ. ಅತ್ಯುತ್ತಮ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ಕೆಳಗೆ ಇಳಿಸುವ ಬಿಜೆಪಿ ಷಡ್ಯಂತ್ರ ನಿರೂಪಿತವಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಂತೆ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡುವ ಅಗತ್ಯ ಇಲ್ಲ’ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.

ಹರಿಹರ ನಗರದಲ್ಲಿಯೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಫಕೀರಸ್ವಾಮಿ ಮಠದಿಂದ ಹರಪನಹಳ್ಳಿ ವೃತದವರೆಗೆ ರಾಜ್ಯಪಾಲರ ಅಣುಕು ಶವಯಾತ್ರೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT