ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ಬಳಿಕ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಪರವಾಗಿ ಮುಸ್ಲಿಂ ಸಮುದಾಯದ ಹಿರಿಯ ನಾಯಕರು ಸರಿಯಾಗಿ ಕೆಲಸ ಮಾಡಿಲ್ಲ. ಸೋಲಿಗೆ ಷಡ್ಯಂತ್ರ ನಡೆಸಿದ್ದಾರೆ ಎಂದು ಅದೇ ಸಮುದಾಯದ ನಾಯಕರು ಆಪಾದಿಸಿದ್ದರು. ಕಾಂಗ್ರೆಸ್ ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ವಿನಃ ತಮ್ಮ ಬೆಂಬಲಕ್ಕೆ ನಿಂತವರಿಗೆ ನ್ಯಾಯಯುತ ಪಾಲನ್ನು ನೀಡುತ್ತಿಲ್ಲ ಎಂಬ ಟೀಕೆಯೂ ಇದೆ. ಕರ್ನಾಟಕದಲ್ಲಿ ಮುಸ್ಲಿಂ ನಾಯಕತ್ವದ ಸ್ಥಿತಿ, ಸಮುದಾಯದ ಹಿತಕ್ಕೆ ಏನಾಗಬೇಕಿದೆ, ಸರ್ಕಾರ –ಕಾಂಗ್ರೆಸ್ ಏನು ಮಾಡಬೇಕಿದೆ ಎಂಬ ವಿಷಯದ ಸುತ್ತ ನಡೆದ ಚರ್ಚೆ ಇಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.