ದಾವಣಗೆರೆ: ಸಾಮಾಜಿಕ ನ್ಯಾಯದ ಪರಿಕಲ್ಪನೆ ಅಡಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದ್ದು, ಅತ್ಯಂತ ತಳ ಸಮುದಾಯಗಳ ಜನರೂ ಅವುಗಳ ಫಲಾನುಭವಿಗಳಾಗಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಪಾಲಿಸಿದೆ ಎಂದು ಕಾಂಗ್ರೆಸ್ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಸಿ.ಎಸ್. ದ್ವಾರಕಾನಾಥ್ ಪ್ರತಿಪಾದಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಬಡವರ ಪರವಾಗಿರುವ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

‘ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಿದೆಯೇ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಾಮಾಜಿಕ ನ್ಯಾಯವನ್ನು ಕುಟುಂಬ ಅಥವಾ ವ್ಯಕ್ತಿಗತವಾಗಿ ಪರಿಗಣಿಸುವುದಕ್ಕಿಂತ ಸಮೂಹದ ದೃಷ್ಟಿಯಿಂದ ನೋಡಬೇಕು’ ಎಂದು ಸ್ಪಷ್ಟಪಡಿಸಿದರು.

ನಾಗರಾಜ, ಪರಮೇಶ್, ವಿಕ್ರಂ, ತಿಪ್ಪಣ್ಣ, ಶಿವು, ಬಾಬು, ಮನೋಜ್, ಆಸಿಫ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-43-1463569132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.