ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದಿ, ಕತ್ತಿ ಕಾಂಗ್ರೆಸ್‌ಗೆ ಬಂದರೆ ನಿಮಗೆ ತಿಳಿಸುತ್ತೇವೆ: ಸತೀಶ್‌ ಜಾರಕಿಹೊಳಿ

Last Updated 31 ಜನವರಿ 2022, 3:38 IST
ಅಕ್ಷರ ಗಾತ್ರ

ಹರಿಹರ (ದಾವಣಗೆರೆ): ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂಬುದು ಗೊತ್ತಾಗಲು ಒಂದು ವರ್ಷ ಬೇಕು. ಚುನಾವಣೆ ಹತ್ತಿರ ಬಂದಾಗ ಕೆಲವರು ಹೋಗೋದು, ಬರೋದು ಇದ್ದಿದ್ದೆ. ಈಗ ಊಹಪೋಹಗಳಷ್ಟೇ ಹರಿದಾಡುತ್ತವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.

ಹರಿಹರದಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

‘ಕಾಂಗ್ರೆಸ್‌ಗೆ ಯಾರು ಬಂದರೂ ಬಿಟ್ಟರೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಹಿಂದಿನ ಎರಡು ಮೂರು ಚುನಾವಣೆಗಳ ಫಲಿತಾಂಶ ನಮ್ಮ ಪರವಾಗಿ ಬಂದಿದೆ. ಇಂದು ಮುಂದಿನ ಚುನಾವಣೆಯ ದಿಕ್ಸೂಚಿ’ ಎಂದು ತಿಳಿಸಿದರು.

‘ಲಕ್ಷ್ಮಣ ಸವದಿ, ಉಮೇಶ್‌ ಕತ್ತಿ ಸಹಿತ ಯಾರೂ ಕಾಂಗ್ರೆಸ್‌ ಅನ್ನು ಸಂಪರ್ಕ ಮಾಡಿಲ್ಲ. ಅವರು ಬಂದರೆ ನಿಮಗೆ ತಿಳಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಗೋಕಾಕ ಅಭಿವೃದ್ಧಿ ಆಗಿಲ್ಲ ಅಂದರೆ ನಾನು ಸ್ಥಳದಲ್ಲೇ ರಾಜೀನಾಮೆ ನೀಡುತ್ತೇನೆ’ ಎಂಬ ರಮೇಶ್‌ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ, ‘ಗೋಕಾಕಕ್ಕೆ ಬಂದು ನೋಡಿದ್ರೆ ಗೊತ್ತಾಗುತ್ತದೆ. ನೀವೂ ಬಂದು ನೋಡಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT