ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಪ್ರತಿಭಟನೆಯ ಮೂಲಕ ‘ಕಿಸಾನ್ ಅಧಿಕಾರ ದಿವಸ್’ ಆಚರಣೆ
Last Updated 31 ಅಕ್ಟೋಬರ್ 2020, 16:24 IST
ಅಕ್ಷರ ಗಾತ್ರ

ದಾವಣಗೆರೆ: ‘ಕಿಸಾನ್ ಅಧಿಕಾರ ದಿವಸ್’ ಅಂಗವಾಗಿ ಭೂ ಸುಧಾರಣೆ, ವಿದ್ಯುತ್ ಬಿಲ್, ಎಪಿಎಂಸಿ ಕಾಯಿದೆ ತಿದ್ದುಪಡಿ ವಿರೋಧಿಸಿ ನಗರದ ಜಯದೇವ ವೃತ್ತದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಬಿ.ಮಂಜಪ್ಪ ಮಾತನಾಡಿ, ‘ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದ್ದು, ಶ್ರೀಮಂತರು, ಉದ್ಯಮಿಗಳ ಪರ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಬೀದಿಪಾಲು ಮಾಡುತ್ತಿದೆ. ಆಧುನೀಕರಣ ಹೆಸರಲ್ಲಿ ದೇಶವನ್ನೇ ಮಾರಾಟಕ್ಕೆ ಯತ್ನಿಸಲಾಗುತ್ತಿದೆ. ಕೋವಿಡ್ ಹೆಸರಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ’ ಎಂದು ಆರೋಪಿಸಿದರು.

ಕಿಸಾನ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜು ವಿ.ಶಿವಗಂಗಾ ಮಾತನಾಡಿ, ‘ದೇಶದಲ್ಲಿ ಜನ ವಿರೋಧಿ ಹಾಗೂ ರೈತ ವಿರೋಧಿ ಆಡಳಿತ ನಡೆಯುತ್ತಿದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುವಂತೆ ಮಾಡುವ ಕಾಯ್ದೆ ತರಬೇಕು. ಆದರೆ ಏಕಪಕ್ಷೀಯ ತೀರ್ಮಾನದಿಂದಾಗಿ ರೈತರ ಜಮೀನನ್ನು ಖಾಸಗಿಯವರಿಗೆ ನೀಡಿ ಕೃಷಿಯನ್ನೇ ನಿರ್ಮೂಲನೆಗೆ ಮುಂದಾಗಿದೆ. ಕೂಡಲೇ ಕಾಯ್ದೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್ ಮಾತನಾಡಿ, ‘ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರ ಸ್ಥಿತಿ ಹೀನಾಯವಾಗಿದೆ’ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ನಾಯಕ ಎ.ನಾಗರಾಜ್, ಸದಸ್ಯರಾದ ದೇವರಮನಿ ಶಿವಕುಮಾರ್, ಜಿ.ಎಸ್.ಮಂಜುನಾಥ್ ಗಡಿಗುಡಾಳ್, ಪಾಮೇನಹಳ್ಳಿ ನಾಗರಾಜ್, ಆಶಾ ಉಮೇಶ್, ಸುಧಾ ಇಟ್ಟಿಗುಡಿ, ಸವಿತಾ ಗಣೇಶ್ ಹುಲ್ಮನಿ, ಶ್ವೇತಾ ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಕೆಪಿಸಿಸಿ ಸದಸ್ಯ ಅಣಜಿ ಅಂಜಿನಪ್ಪ, ಸಾಮಾಜಿಕ ಜಾಲತಾಣದ ಗೋವಿಂದ್ ಹಾಲೇಕಲ್ಲು, ಮಹಿಳಾ ಕಾಂಗ್ರೆಸ್‍ನ ಶುಭಮಂಗಳ, ರಾಜೇಶ್ವರಿ, ಉಮಾ ಕುಮಾರ್, ಕವಿತಾ, ಆವರಗೆರೆಯ ಲಕ್ಷ್ಮೀಬಾಯಿ ಅಣ್ಣಪ್ಪ, ಸರ್ವಮಂಗಳಮ್ಮ, ರಾಧಾಬಾಯಿ, ಗೀತಾ ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT