‘ಅಭ್ಯರ್ಥಿಯ ಆಯ್ಕೆ ಹೈಕಮಾಂಡ್ ಬಿಟ್ಟಿದ್ದು’
‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯ ಆಯ್ಕೆಯ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ. ದಕ್ಷಿಣ ಕ್ಷೇತ್ರದ ಜನತೆ ಅಪ್ಪಾಜಿಯವರನ್ನು 6 ಬಾರಿ ಶಾಸಕರನ್ನು ಮತ್ತು ಒಮ್ಮೆ ಸಂಸದರನ್ನಾಗಿ ಮಾಡಿರುವುದಕ್ಕೆ ನಾವು ಚಿರಋಣಿಯಾಗಿದ್ದೇವೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು. ‘ಪುತ್ರ ಸಮರ್ಥ್ ಲೋಕಸಭಾ ಚುನಾವಣೆಯಲ್ಲಿ ಓಡಾಡಿದ್ದಾರೆ. ಅವರ ಸರಳತೆಯಿಂದ ಜನಾನುರಾಗಿ ಗುರುತಿಸಿಕೊಂಡಿದ್ದಾರೆ. ಹಾಗಂತ ಸಮರ್ಥನನ್ನು ಅಭ್ಯರ್ಥಿ ಮಾಡುವ ವಿಚಾರ ನಮ್ಮ ತಲೆಯಲ್ಲಿಲ್ಲ. ಜನ ಸೇವೆ ಮಾಡುವವರ ಹೆಸರನ್ನು ನಾವು ಶಿಫಾರಸು ಮಾಡುತ್ತೇವೆ. ಹೈಕಮಾಂಡ್ ಜನರ ನಾಡಿಮಿಡಿತ ಅರಿತು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ. ಅದಕ್ಕೆ ನಾವೆಲ್ಲರೂ ಬದ್ಧರಾಗಿ ಗೆಲ್ಲಿಸಿಕೊಂಡು ಬರುತ್ತೇವೆ’ ಎಂದು ಹೇಳಿದರು.