ದಾವಣಗೆರೆ: ‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸ್ಥಳೀಯ ಮುಸ್ಲಿಂ ನಾಯಕರ ಮನವೊಲಿಸುತ್ತೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

‘ರಾಜ್ಯಮಟ್ಟದಲ್ಲಿ ಈಗಾಗಲೇ ಪಕ್ಷದ ವರಿಷ್ಠರು ಮುಸ್ಲಿಂ ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳೀಯವಾಗಿಯೂ ಮುಸ್ಲಿಂ ಮುಖಂಡರ ಮನೆಗಳಿಗೆ ತೆರಳಿ ಸಮಾಧಾನಪಡಿಸುವ ಕೆಲಸವನ್ನು ಜಿಲ್ಲಾ ಘಟಕದಿಂದ ಮಾಡುತ್ತೇವೆ’ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಮುಸ್ಲಿಂ ಸೇರಿದಂತೆ ಎಲ್ಲಾ ಸಮುದಾಯವರನ್ನು ಒಟ್ಟಾಗಿ ಕರೆದೊಯ್ಯುವ ಕೆಲಸವನ್ನು ಮಾಡುತ್ತೇವೆ’ ಎಂದರು.

ನಾಮಪತ್ರ ಸಲ್ಲಿಕೆ ನಾಳೆ:

‘ಸಮರ್ಥ ಶಾಮನೂರು ಅವರು ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ನಗರದೇವತೆ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಹಜರತ್ ಷಾವಲಿ ದರ್ಗಾದಲ್ಲಿ ಪೂಜೆ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.

‘ನಂತರ ಹಳೇಪೇಟೆ, ಹಗೇದಿಬ್ಬ ವೃತ್ತ, ಗಾಂಧಿನಗರ, ಆಜಾದ್ ನಗರ, ಅಹಮದ್ ನಗರ, ಚಾರ್ಲಿ ಪೈಲ್ವಾನ್ ವೃತ್ತ, ಹಾಸಬಾವಿ ವೃತ್ತ, ಚಾಮರಾಜಪೇಟೆ ಮುಖ್ಯ ರಸ್ತೆ, ಮಂಡಿಪೇಟೆ, ರೈಲ್ವೇ ಕೆಳಸೇತುವೆ, ಪಿ.ಬಿ.ರಸ್ತೆ ಮಾರ್ಗದಲ್ಲಿ ಮಹಾನಗರ ಪಾಲಿಕೆ ವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಹಾಗೂ ಕಾಂಗ್ರೆಸ್ ನಾಯಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಮುಸ್ಲಿಂ ಸಮುದಾಯದವರಿಗೆ ಕಾಂಗ್ರೆಸ್ನಿಂದ ಯಾವುದೇ ರೀತಿಯ ಆಹಾರ ಕಿಟ್ ವಿತರಿಸಿಲ್ಲ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಬೆಂಬಲಿಗರು ಅಥವಾ ಪಕ್ಷದ ಕಾರ್ಯಕರ್ತರು ವೈಯಕ್ತಿಕವಾಗಿ ವಿತರಿಸಿದ್ದರೆ ಪಕ್ಷ ಹೊಣೆಯಲ್ಲ’ ಎಂದು ಸ್ಪಷ್ಟಪಡಿಸಿದರು.

‘ನಗರದಲ್ಲಿ ಸೋಮವಾರ (ಮಾರ್ಚ್ 23ರಂದು) ಮುಸ್ಲಿಂ ಸಮುದಾಯದ ಜೆಡಿಎಸ್ ಮುಖಂಡರು ನಡೆಸುವ ಸಭೆಯಲ್ಲಿ ಸಮುದಾಯದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರೆ ಅವರ ವಿರುದ್ಧ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಎಚ್ಚರಿಸಿದರು.

‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಪಕ್ಷದ ಮುಖಂಡರಾದ ನಿಂಗಪ್ಪ ಜಿ.ಸಿ., ಬಿ.ಎಚ್.ವೀರಭದ್ರಪ್ಪ, ಅನಿತಾಬಾಯಿ, ಕೆ.ಚಮನ್ಸಾಬ್, ಮುದೇಗೌಡ್ರ ಗಿರೀಶ್, ಹನುಮಂತಪ್ಪ, ಗಿರೀಶ್, ಎ.ನಾಗರಾಜ್ ಸೇರಿದಂತೆ ಇನ್ನಿತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.